ವಕ್ವಾಡಿ: ಜಿಲ್ಲಾ ಮಟ್ಟದ ಗುಡ್ಡಗಾಡು ಓಟಕ್ಕೆ ಚಾಲನೆ

0
23

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ: ವಕ್ವಾಡಿ ಸರಕಾರಿ ಪ್ರೌಢಶಾಲೆಯ ಧ್ಯಾನ್‍ಚಂದ್ ಕ್ರೀಡಾ ಸಂಘ, ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಆಶ್ರಯದಲ್ಲಿ ವಕ್ವಾಡಿ ಸರಕಾರಿ ಪ್ರೌಢಶಾಲೆ ವಠಾರದಲ್ಲಿ ಉಡುಪಿ ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗುಡ್ಡಗಾಡು ಓಟ ಸ್ಪರ್ಧೆಗೆ ಶನಿವಾರ ಚಾಲನೆ ನೀಡಲಾಯಿತು.ಬೀಜಾಡಿ ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯೆ ಶ್ರೀಲತಾ ಸುರೇಶ್ ಶೆಟ್ಟಿ ಸ್ಪರ್ಧೆಗೆ ಚಾಲನೆ ನೀಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಕಾಳವಾರ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿರಾಜ್ ಶೆಟ್ಟಿ,ನಿವೃತ್ತ ಗ್ರಾಮ ಲೆಕ್ಕಿಗ ನಾರಾಯಣ ಶೆಟ್ಟಿ,ಉದ್ಯಮಿಗಳಾದ ರಘರಾಮ ಶೆಟ್ಟಿ, ಆನಂದ ಆಚಾರ್ಯ,ಮಲಾಡಿ ರಾಜು ಶೆಟ್ಟಿ,ಶ್ಯಾಮ್‍ರಾಜ್ ಶೆಟ್ಟಿ ವಕ್ವಾಡಿ,ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಕಛೇರಿಯ ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ದತ್ತಾತ್ರೇಯ ನಾಯಕ್,ಕುಂದಾಪುರ ತಾಲೂಕು ಯುವಜನ ಸೇವಾ ಕ್ರೀಡಾಧಿಕಾರಿ ಕುಸುಮಾಕರ,ಕುಂದಾಪುರ ವಲಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮಲ್ಯಾಡಿ ಸದಾರಾಮ ಶೆಟ್ಟಿ,ಉಡುಪಿ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ,ಉಪಾಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿ,ಮಾಜಿ ಅಧ್ಯಕ್ಷ ಕರುಣಾಕರ ಶೆಟ್ಟಿ,ಮಾಜಿ ಕೋಶಾಧಿಕಾರಿ ಅಂಪಾರು ಬಾಲಕೃಷ್ಣ ಶೆಟ್ಟಿ,ವಕ್ವಾಡಿ ಸರಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯಿನಿ ಭಾರತಿ ಎನ್,ನಿವೃತ್ತ ಶಿಕ್ಷಕ ದಿನಕರ ಶೆಟ್ಟಿ, ಕಿಶೋರ ವಕ್ವಾಡಿ,ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕೋಶಾಧಿಕಾರಿ ಜಯಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

ಈ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸುಮಾರ 450ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಅಧ್ಯಕ್ಷ ಸತ್ಯಾನಂದ ಸಾಲಿಸ್ಸ್ ಸ್ವಾಗತಿಸಿದರು.ಶಿಕ್ಷಕ ವೇಣುಗೋಪಾಲ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು.ಕುಂದಾಪುರ ವಲಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಕಾರ್ಯದರ್ಶಿ ಸುಧಾಕರ ಶೆಟ್ಟಿ ವಂದಿಸಿದರು.

ವರದಿ : ಚಂದ್ರಶೇಖರ ಬಿಜಾಡಿ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia