ಕುಂದಾಪುರ : ಯುವಕ-ಯುವತಿಯರಿದ್ದ ಕಾರು ಅಡ್ಡಗಟ್ಟಿದ ಸಂಘಟನೆ ಕಾರ್ಯಕರ್ತರು: ಪೊಲೀಸರಿಂದ ತರಾಟೆ

0
173

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕುಂದಾಪುರ: ಕುಂದಾಪುರದಿಂದ ಉಡುಪಿ ಕಡೆ ಸಾಗುತ್ತಿದ್ದ ಯುವಕ-ಯುವತಿಯರಿದ್ದ ಕಾರನ್ನು ಅಡ್ಡಗಟ್ಟಿದ ಹಿಂದೂಪರ ಸಂಘಟನೆಯನ್ನು ಪೊಲೀಸರು ತರಾಟೆಗೆ ತೆಗೆದುಕೊಂಡ ಘಟನೆ ಕುಂದಾಪುರ ತಾಲೂಕಿನ ಕೋಟೇಶ್ವರದಲ್ಲಿ ನಡೆದಿದೆ.

ಉಡುಪಿಯ ಕಾಲೇಜೊಂದರ ವಿದ್ಯಾರ್ಥಿಗಳಾಗಿರುವ ಮೂವರು ಯುವತಿಯರು ಹಾಗೂ ಇಬ್ಬರು ಯುವಕರಿದ್ದ ಕಾರನ್ನು ಅಡ್ಡಗಟ್ಟಿದ ಹಿಂದೂಪರ ಸಂಘಟನೆ, ಯುವಕ ಯುವತಿಯರನ್ನು ಪೊಲೀಸರಿಗೊಪ್ಪಿಸಿದ್ದಾರೆ.

ಯುವಕ-ಯುವತಿಯರ ಅಸಭ್ಯ ವರ್ತನೆ ಕಂಡು ಹಿಂಬಾಲಿಸಿದ್ದಾಗಿ ತಿಳಿಸಿದ ಸಂಘಟನೆ ಕಾರ್ಯಕರ್ತರನ್ನು ಪೊಲೀಸರು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇದರಿಂದ ಕೆಲಸಮಯ ಪೊಲೀಸ್ ಠಾಣೆಯಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia