ಬೊಲೆರೋ, ಲಾರಿ ಡಿಕ್ಕಿಯಾಗಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ- 4 ಮಕ್ಕಳು ಸೇರಿ 10 ಮಂದಿ ಸಾವು

0
130

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಬಳಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.

ಅರಬೈಲ್ ಸಮೀಪ ಬೊಲೆರೋ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೊಲೆರೋದಲ್ಲಿದ್ದ 4 ಮಕ್ಕಳು ಸೇರಿ 10 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಬೊಲೇರೋ ವಾಹನ ಯಲ್ಲಾಪುರದಿಂದ ಅಂಕೋಲ ಕಡೆಗೆ ತೆರಳುತ್ತಿತ್ತು. ಹಾಗೂ ಲಾರಿ ಅಂಕೋಲದಿಂದ ಯಲ್ಲಾಪುರಕ್ಕೆ ತೆರಳುತ್ತಿತ್ತು. ಅಪಘಾತ ಸ್ಥಳದಲ್ಲಿ ಚಿತ್ರಣ ಭಯಾನಕವಾಗಿತ್ತು.

ಜಿಲ್ಲೆಯ ಭಟ್ಕಳ ತಾಲೂಕಿನ ಸೋಡಿಗದ್ದೆ ಕ್ರಾಸ್ ಬಳಿ ಮತ್ತೊಂದು ಅಪಘಾತ ಸಂಭವಿಸಿದೆ. ಮೀನಿನ ಲಾರಿ ಹಾಗೂ ಖಾಸಗಿ ಬಸ್ಸು ಮೊದಲು ಮುಖಾಮುಖಿ ಡಿಕ್ಕಿಯಾಗಿದ್ದು, ನಂತರ ಹಿಂದಿನಿಂದ ಬಂದ ಮತ್ತೊಂದು ಬಸ್ ಡಿಕ್ಕಿ ಹೊಡೆದು ಅಪಘಾತವಾಗಿದೆ. ಅಪಘಾತದಲ್ಲಿ ಲಾರಿ ಚಾಲಕ 25 ವರ್ಷದ ಅಬ್ದುಲ್ಲಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಬಸ್‍ನಲ್ಲಿದ್ದ 15 ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಭಟ್ಕಳ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಮೀನಿನ ಲಾರಿ ಗೋವಾದಿಂದ ಕೇರಳ ಕಡೆಗೆ ತೆರಳುತ್ತಿತ್ತು. ಇನ್ನೂ ಖಾಸಗಿ ಬಸ್‍ಗಳು ಮಂಗಳೂರಿನಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದವು ಎಂದು ತಿಳಿದುಬಂದಿದೆ. ಭಟ್ಕಳ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia