ಫೇಸ್‌ಬುಕ್‌ನಲ್ಲಿ ಅಸಭ್ಯ ಚಿತ್ರ ಪೋಸ್ಟ್‌‌‌ ಮಾಡುತ್ತಿದ್ದ ಆರೋಪಿ ಅಂದರ್‌‌

0
76

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು: ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ಸೃಷ್ಟಿಸಿ, ಅಸಭ್ಯ ಚಿತ್ರಗಳು ಮತ್ತು ಸಂದೇಶಗಳನ್ನು ಪೋಸ್ಟ್ ಮಾಡುತ್ತಿದ್ದ ಅರೋಪಿಯನ್ನು ಇಲ್ಲಿನ ಕಂಕನಾಡಿ ನಗರ ಪೋಲಿಸ್ ಠಾಣೆಯ ಪೋಲಿಸ್ ಇನ್ಸ್‌ಪೆಕ್ಟರ್ ರವಿನಾಯ್ಕ್ ಬಂಧಿಸಿದ್ದಾರೆ.

ಚತ್ತೀಸ್‌ಗಡದ ತೋರಾನ್ ಲಾಲ್ ರಾವಟೆ (23) ಬಂಧಿತ ಆರೋಪಿ. ಮಂಗಳೂರಿನ ಯೆಯ್ಯಾಡಿಯಲ್ಲಿ ಕಾರ್ಮಿಕನಾಗಿ ದುಡಿಯುತ್ತಿದ್ದು, ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆದು ಅದರಲ್ಲಿ ಅನಾಮಧೇಯ ವ್ಯಕ್ತಿಗಳ ಭಾವಚಿತ್ರಗಳನ್ನು ಮತ್ತು ಅಶ್ಲೀಲ ಸಂದೇಶಗಳನ್ನು ಹಾಕುವ ಕುಕೃತ್ಯಗಳನ್ನು ಮಾಡುತ್ತಿದ್ದ ಎಂದು ಪೋಲಿಸರು ತಿಳಿಸಿದ್ದಾರೆ.

ಅರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia