ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರುನಲ್ಲಿ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ

0
102

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು. ಸೆ, 13 : ಕುಂದಾಪುರ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ ಸರಕಾರಿ ಪದವಿ ಪೂರ್ವ ಕಾಲೇಜು ಬೈಂದೂರುನಲ್ಲಿ ನಡೆಯಿತು.

ಹುಡುಗರ ವಿಭಾಗದಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಕುಂದಾಪುರ ಪ್ರಥಮ ಸ್ಥಾನ, ಸರಸ್ವತಿ ವಿದ್ಯಾಲಯ ಗಂಗೊಳ್ಳಿ ದ್ವಿತೀಯ ಸ್ಥಾನ ಮತ್ತು ಹುಡುಗಿಯರ ವಿಭಾಗದಲ್ಲಿ ವರಸಿದ್ದಿ ವಿನಾಯಕ ಪದವಿ ಪೂರ್ವ ಕಾಲೇಜು ಕೆರಾಡಿ ಪ್ರಥಮ ಸ್ಥಾನ, ಎಕ್ಸಲೆಂಟ್ ಕುಂದಾಪುರ ದ್ವಿತೀಯ ಸ್ಥಾನವನ್ನು ಗಳಿಸಿತು.

ಬಹುಮಾನ ವಿತರಣಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪಾಲಾಕ್ಷಾ ಟಿ ವಹಿಸಿದ್ದರು,

ಮುಖ್ಯ ಅತಿಥಿಗಳಾಗಿ ಎಸ್.ಡಿ.ಎಂ.ಸಿ ಸದಸ್ಯರಾದ ಮಣಿಕಂಠ ಎಸ್ ಹಾಗೂ ಪ್ರಾಥಮಿಕ ಶಾಲಾ ಶಿಕ್ಷಕ ಸಂಘದ ಅಧ್ಯಕ್ಷ ವಿಶ್ವನಾಥ ಪೂಜಾರಿ ಮತ್ತು ದೈಹಿಕ ಶಿಕ್ಷಕ ಸಂಘದ ಅಧ್ಯಕ್ಷ ರಾಜು ಶೆಟ್ಟಿ ಉಪಸ್ಥಿತರಿದ್ದರು.

ವಲಯ ದೈಹಿಕ ಶಿಕ್ಷಣ ಸಂಚಾಲಕರಾದ ಶ್ರೀ ಪ್ರಭಾಕರ ಇವರು ಸ್ವಾಗತಿಸಿ , ವಂದಿಸಿದರು

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia