ಮಾಜಿ ಸಚಿವ ಖಮರುಲ್ ಇಸ್ಲಾಂ ಹೃದಯಾಘಾತದಿಂದ ನಿಧನ

0
1150

ಬೆಂಗಳೂರು: ಮಾಜಿ ಸಚಿವ ಖಮರುಲ್ ಇಸ್ಲಾಂ(69) ಹೃದಯಘಾತದಿಂದ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಖಮರುಲ್ ಇಸ್ಲಾಂ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಕಲಬುರಗಿ ಉತ್ತರ ಕ್ಷೇತ್ರದ ಶಾಸಕರಾಗಿದ್ದ ಖಮರುಲ್ ಇಸ್ಲಾಂ ಸಿದ್ದರಾಮಯ್ಯ ಸಂಪುಟದಲ್ಲಿ ಈ ಹಿಂದೆ ವಕ್ಫ್ ಖಾತೆಯ ಸಚಿವರಾಗಿದ್ದರು. ಎಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದ ಇವರು 1974ರಲ್ಲಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಮೂರು ಬಾರಿ ಮುಸ್ಲಿಮ್ ಲೀಗ್ ಮತ್ತು ಮೂರು ಬಾರಿ ಕಾಂಗ್ರೆಸ್‍ನಿಂದ ಜಯಗಳಿಸಿದ್ದರು.