ಬೈಂದೂರಿನಲ್ಲಿ ವಿಶ್ವ ಡಯಾಬಿಟಿಸ್ ಸಪ್ತಾಹದ ಅಂಗವಾಗಿ ಮಧುಮೇಹ ದಿನಾಚರಣೆ

0
156
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ನ.13 : ಆರೋಗ್ಯವೇ ಭಾಗ್ಯ, ಹಾಗಾಗಿ ನಾವು ನಮ್ಮ ಆರೋಗ್ಯವನ್ನು ಚೆನ್ನಾಗಿ ಇಟ್ಟುಕೊಂಡರೆ ಉಳಿದೆಲ್ಲ ಸೌಲಭ್ಯಗಳನ್ನು ಅನುಭವಿಸಲು ಸಾಧ್ಯ. ಆರೋಗ್ಯಪೂರ್ಣವಾದ ದೈನಂದಿನ ಬದುಕಿಗೆ ವ್ಯಾಯಾಮ, ಯೋಗ ಮಾಡುವುದರ ಜೊತೆಗೆ ಕಾಲಕಾಲಕ್ಕೆ ರಕ್ತ ಮೂತ್ರ ತಪಾಸಣೆ ಮಾಡಿಸಿಕೊಳ್ಳುವುದು ಅತೀ ಅಗತ್ಯ. ಸಂಘ ಸಂಸ್ಥೆಗಳು ಈ ನಿಟ್ಟಿನಲ್ಲಿ ಉಚಿತವಾಗಿ ಆರೋಗ್ಯ ಶಿಬಿರವನ್ನು ಆಯೋಜಿಸುತ್ತಿರುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯ ಸುರೇಶ ಬಟವಾಡಿ ಹೇಳಿದರು.

ಧರ್ಮಶ್ರೀ ರಿಲೀಫ್ ಫೌಂಡೇಶನ್ ನಾಯ್ಕನಕಟ್ಟೆ ಹಾಗೂ ಅಂಜಲಿ ಆಸ್ಪತ್ರೆ ಬೈಂದೂರು ಸಹಯೋಗದಲ್ಲಿ ವಿಶ್ವ ಡಯಾಬಿಟಿಸ್ ಸಪ್ತಾಹದ ಅಂಗವಾಗಿ ಮಧುಮೇಹ ತಪಾಸಣಾ ಶಿಬಿರವನ್ನು ಅವರು ಉದ್ಘಾಟಿಸಿ ಮಾತನಾಡಿದರು. ಬೈಂದೂರು ರೈಲ್ವೇ ನಿಲ್ದಾಣದಲ್ಲಿ ಜರುಗಿದ ಶಿಬಿರದಲ್ಲಿ ಅಂಜಲಿ ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ. ಸುಬ್ರಹ್ಮಣ್ಯ ಭಟ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಧರ್ಮಶ್ರೀ ರಿಲೀಫ್ ಫೌಂಡೇಶನ್ ಗಣೇಶ ಆರ್. ಮೊಗವೀರ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)