ಕುಂದಾಪುರ ಪರಿವರ್ತನಾ ಯಾತ್ರೆಯಲ್ಲಿ ಹಾಲಾಡಿ ವಿರೋಧಿಗಳಿಗೆ ಇರೋರು ಇರಿ ಹೋಗೋರು ಹೋಗಿ ಬಿಎಸ್ ವೈ ಖಡಕ್

0
270
dinetmedia

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಕುಂದಾಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಯೂರಪ್ಪ ಅವರ ನೇತೃತ್ವದಲ್ಲಿ ನಡೆಯುತ್ತಿರುವ ನವಕರ್ನಾಟಕ ಪರಿವರ್ತನಾ ಸಮಾವೇಶ ಕುಂದಾಫುರಕ್ಕೆ ತಲುಪಿದ್ದು, ಕುಂದಾಪುರದಲ್ಲಿ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಸೋಮವಾರ ಬಹಿರಂಗವಾಗಿ ಜಟಾಪಟಿ ನಡೆದಿದೆ.


ಕುಂದಾಪುರದಲ್ಲಿ ಪಕ್ಷೇತರ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಬಿಜೆಪಿ ಸೇರ್ಪಡೆಯನ್ನು ಬಿಜೆಪಿಯ ಕೆಲ ಕಾರ್ಯಕರ್ತರು ಬಹಿರಂಗವಾಗಿಯೇ ಹಿಡಿದು ವಿರೋಧ ವ್ಯಕ್ತಪಡಿಸಿದ್ದಾರೆ. ಹಾಲಾಡಿಯವರು ಬಿಜೆಪಿ ಸೇರ್ಪಡೆಯನ್ನು ವಿರೋಧಿಸಿ ಕೆಲವೊಂದು ಬಿಜೆಪಿ ಕಾರ್ಯಕರ್ತರು ಬ್ಯಾನರ್ ಹಿಡಿದು ಪ್ರತಿಭಟಿಸಿದ್ದು, ಈ ವೇಳೆ ಹಾಲಾಡಿ ಶ್ರೀನಿವಾಸ ಶೆಟ್ಟಿ ಹಾಗೂ ಬಿಜೆಪಿ ಬಣಗಳ ನಡುವೆ ಮಾತಿನ ಚಕಮಕಿ ನಡೆದಿದೆ. ಅಲ್ಲದೆ ಹಾಲಾಡಿ ಶ್ರೀನಿವಾಸ ಶೆಟ್ಟಿ ವಿರೋಧಿಗಳು ಯಡ್ಯೂರಪ್ಪ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದರಿಂದ ಮುಜುಗರಕ್ಕೀಡಾದ ರಾಜ್ಯಾಧ್ಯಕ್ಷ ಬಿ ಎಸ್ ಯಡ್ಯೂರಪ್ಪ ಸ್ವತಃ ಮಧ್ಯಪ್ರವೇಶ ಮಾಡಿ ಮಾತನಾಡಿ ಹಾಲಾಡಿ ಶ್ರೀನಿವಾಸ ಶೆಟ್ಟಿಯವರೇ ನಮ್ಮ ನಾಯಕರಾಗಿದ್ದು ಅವರೇ ನಮ್ಮ ಮುಂದಿನ ಶಾಸಕ ಸ್ಥಾನದ ಅಭ್ಯರ್ಥಿ. ಇದನ್ನು ಒಪ್ಪದವರು ಈಗಲೇ ಹೊರಗೆ ಹೋಗಿ ಎಂದು ಅವರು ಬಿಜೆಪಿ ಕಾರ್ಯಕರ್ತರ ವಿರುದ್ದ ಹರಿಹಾಯ್ದರು. ಅಲ್ಲದೆ ಪಕ್ಷ ಅಂತಹವರ ವಿರುದ್ದ ಶಿಸ್ತುಕ್ರಮ ಕೈಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಇಷ್ಟೇಲ್ಲಾ ಘಟನೆಗಳು ನಡೆಯುತ್ತಿದ್ದರೂ ಕುಂದಾಪುರ ಪಕ್ಷೇತರ ಶಾಸಕರಾಗಿರುವ ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಸಭಿಕರ ಸಾಲಿನಲ್ಲಿ ಕುಳಿತು ಸಮಾವೇಶದಲ್ಲಿ ಪಾಲ್ಗೊಂಡರು.

ಎರಡು ಬಣಗಳ ನಡುವೆ ನಡೆದ ಮಾತಿನ ಚಕಮಕಿ ಹೊಡೆದಾಟಕ್ಕೆ ಹೋಗಿದ್ದು ಸ್ವತಃ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ. ಎಮ್ ಸಂಜೀವ್ ಪಾಟೀಲ್ ಇತರ ಪೋಲಿಸರೊಂದಿಗೆ ಮಧ್ಯಪ್ರವೇಶ ಮಾಡಿ ಪರಿಸ್ಥಿತಿಯನ್ನು ತಿಳಿಗೊಳಿಸಿ ಗುಂಪುಗಳನ್ನು ಪೋಲಿಸರು ಚದುರಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)