ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನ ವಿತರಣೆ

0
142
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ : ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲೆಗಳಲ್ಲಿ ಕೊಂಕಣಿ ಭಾಷೆಯನ್ನು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮಂಗಳೂರಿನ ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಸ್ಕೂಲ್ ಬ್ಯಾಗ್ ಮತ್ತು ವಿದ್ಯಾರ್ಥಿವೇತನವನ್ನು ವಿತರಿಸಲಾಯಿತು.

ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಂಗಳೂರು ವಿಶ್ವ ಕೊಂಕಣಿ ಕೇಂದ್ರದ ಅಧ್ಯಕ್ಷ ಬಸ್ತಿ ವಾಮನ ಶೆಣೈ ಅವರು ಶಾಲೆಯಲ್ಲಿ ಕೊಂಕಣಿ ಭಾಷೆಯನ್ನು ಅಧ್ಯಯನ ಮಾಡುತ್ತಿರುವ ಸುಮಾರು 53 ವಿದ್ಯಾರ್ಥಿಗಳಿಗೆ ಸುಮಾರು 47,800 ರೂ. ವಿದ್ಯಾರ್ಥಿ ವೇತನ ಮತ್ತು 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸ್ಕೂಲ್ ಬ್ಯಾಗ್ ವಿತರಿಸಿ ಶುಭ ಹಾರೈಸಿದರು.

ಈ ಸಂದರ್ಭ ಮಾತನಾಡಿದ ಅವರು ಕೊಂಕಣಿ ಭಾಷೆಯನ್ನು ಶಾಲೆಯಲ್ಲಿ ತೃತೀಯ ಭಾಷೆಯನ್ನಾಗಿ ಅಧ್ಯಯನ ಮಾಡಲು ಸರ್ಕಾರ ಅನುಕೂಲ ಮಾಡಿಕೊಟ್ಟಿದೆ. ವಿದ್ಯಾರ್ಥಿಗಳಿಗೆ ಕೊಂಕಣಿ ಭಾಷೆಯನ್ನು ಮುಂದಿನ ತಮ್ಮ ವಿದ್ಯಾಭ್ಯಾಸದಲ್ಲಿ ಮುಂದುವರಿಸಿಕೊಂಡುವ ಹೋಗುವ ಅವಕಾಶ ಇದ್ದು, ಕೊಂಕಣಿ ಭಾಷೆಯಿಂದ ಶೈಕ್ಷಣಿಕ ಜೀವನದ ಮೇಲೆ ಯಾವುದೇ ಪರಿಣಾಮ ಬೀರುದಿಲ್ಲ. ಮಕ್ಕಳಿಗೆ ಕೊಂಕಣಿ ಭಾಷೆ ಕಲಿಯಲು ಉತ್ತೇಜನ ನೀಡುವ ದೃಷ್ಟಿಯಿಂದ ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಪ್ರೋತ್ಸಾಹ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.

ಮಂಗಳೂರು ವಿಶ್ವ ಕೊಂಕಣಿ ಕೇಂದ್ರದ ಕಾರ್ಯದರ್ಶಿ ಡಾ.ಮೋಹನ ಪೈ, ಸದಸ್ಯೆ ಉಷಾ ಮೋಹನ ಪೈ, ಗಂಗೊಳ್ಳಿ ಜಿಎಸ್‍ವಿಎಸ್ ಅಸೋಸಿಯೇಶನ್ ಕಾರ್ಯದರ್ಶಿ ಎಚ್.ಗಣೇಶ ಕಾಮತ್, ಗಂಗೊಳ್ಳಿ ಕ್ಲಸ್ಟರ್‍ನ ಸಿಆರ್‍ಪಿ ತಿಲೋತ್ತಮ ನಾಯಕ್, ಶಾಲೆಯ ಕೊಂಕಣಿ ಭಾಷಾ ಶಿಕ್ಷಕಿ ರೇಷ್ಮಾ ಆರ್.ಚಿತ್ತಾಲ್ ಮತ್ತಿತರರು ಉಪಸ್ಥಿತರಿದ್ದರು.

ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪಪ್ರಾಂಶುಪಾಲ ಕೆ.ಸದಾನಂದ ವೈದ್ಯ ಸ್ವಾಗತಿಸಿದರು. ಶಾಲೆಯ ಕೊಂಕಣಿ ಭಾಷಾ ಶಿಕ್ಷಕಿ ನಮಿತಾ ಆರ್.ಶೆಣೈ ವಂದಿಸಿದರು.

ವರದಿ : ಬಿ. ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)