ರಾಜ್ಯ ಸರ್ಕಾರದಿಂದ ಲೂಟಿ, ದರೋಡೆ : ಬಿ.ಎಸ್. ಯಡಿಯೂರಪ್ಪ

0
271
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು ನ.14 : ರಾಜ್ಯದ ಕಾಂಗ್ರೆಸ್ ಸರ್ಕಾರ ಎಲ್ಲ ರಂಗಗಳಲ್ಲೂ ವಿಫಲವಾಗಿದೆ. ಕೇಂದ್ರ ನೀಡಿದ ಕೋಟ್ಯಂತರ ರೂಪಾಯಿ ಅನುದಾನವನ್ನು ಸೂಕ್ತವಾಗಿ ಬಳಸಿಕೊಂಡು ರಾಜ್ಯದ ಅಭಿವೃದ್ಧಿ ಸಾಧಿಸುವ ಬದಲು ಅದರ ಲೂಟಿ ಮತ್ತು ದರೋಡೆ ನಡೆಸಿದೆ. ಜನಹಿತ ಮರೆತ ಈ ಸರ್ಕಾರ ತೊಲಗಲೇ ಬೇಕು ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ. ಎಸ್. ಯಡಿಯೂರಪ್ಪ ಹೇಳಿದರು.

ಬಿಜೆಪಿ ಪರಿವರ್ತನಾ ಯಾತ್ರೆಯ ಭಾಗವಾಗಿ ಬೈಂದೂರು ವಿಧಾನ ಸಭಾ ಕ್ಷೇತ್ರದ ನಾಗೂರಿನಲ್ಲಿ ಸೋಮವಾರ ನಡೆದ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು ರಾಜ್ಯವನ್ನು ಕಾಂಗ್ರೆಸ್ ಮುಕ್ತವಾಗಿಸಲು ಬೂತ್ ಮಟ್ಟದಿಂದಲೇ ಪಕ್ಷವನ್ನು ಬಲಪಡಿಸಿ ಎಂದ ಅವರು ಕಾಂಗ್ರೆಸ್‍ನಲ್ಲಿ ಈಗಾಗಲೇ ಆಂತರಿಕ ಕಚ್ಚಾಟ ಆರಂಭಗೊಂಡಿದೆ ಅವರ ಬಣ್ಣ ಬಯಲಾಗಿದ್ದು ಅಲ್ಲಿ ಭ್ರಷ್ಟರೇ ತುಂಬಿದ್ದಾರೆ. ರಾಜ್ಯ ಸರ್ಕಾರ ದುರುಪಯೋಗ ಮಾಡುತ್ತಿದೆ.

ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಯಾಗಿ ಸಾಬೀತಾಗಿರುವ ವೇಣುಗೋಪಾಲ್ ಅವರನ್ನು ಲೋಕಾಸಭಾ ಸದಸ್ಯರಾಗಿ ಮತ್ತು ಕರ್ನಾಟಕ ರಾಜ್ಯದ ಉಸ್ತುವಾರಿಯಾಗಿ ಮುಂದುವರಿಸುತ್ತೀರಾ ಎಂಬ ನಮ್ಮ ಪ್ರಶ್ನೆಗೆ ಕಾಂಗ್ರೆಸ್ ಅಧ್ಯಕ್ಷ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಉತ್ತರ ನೀಡಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮಾನ, ಮರ್ಯಾದೆಯಿದ್ದಲ್ಲಿ ವೇಣುಗೋಪಾಲ್ ಅವರನ್ನು ತಕ್ಷಣ ಬಂಧಿಸಿ ಜೈಲಿಗೆ ಕಳುಹಿಸಲು ಕ್ರಮಕೈಗೊಳ್ಳಲಿ ಎಂದರು.

ರಾಜ್ಯದ ಬಗ್ಗೆ ನನ್ನದೆ ಆದ ಕನಸುಗಳಿವೆ ಅದನ್ನು ಇವತ್ತು ಹೇಳಿದರೆ ಬುರುಡೇ ದಾಸಯ್ಯ ಸಿದ್ಧಾರಾಮಯ್ಯ ನಾನೇ ಮಾಡುತ್ತೇನೆ ಎಂದು ಹೇಳುತ್ತಾರೆ, ನನ್ನ ನನ್ನ 75ದಿನದ ಯಾತ್ರೆ ಮುಗಿಸಿ ಜ.28ರಂದು ಬೆಂಗಳೂರಿನ ಸಮಾರೋಪ ಸಭೆಯಲ್ಲಿ ಪ್ರಧಾನ ಮಂತ್ರಿ ಮೋದಿ ಭಗವಹಿಸಲ್ಲಿದ್ದಾರೆ ಆ ಸಮಯದಲ್ಲಿ ನಿಮ್ಮ ಎಲ್ಲ ಸಮಸ್ಯೆಗೆ ಉತ್ತರ ಮತ್ತು ಪರಿಹಾರ ಕೊಡುತ್ತೇನೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಜನರಿಕ್ ಓಷಧ ಯೋಜನೆಯಲ್ಲಿ 100ರೂ. ಟ್ಲಾಬೆಟ್‍ನ್ನು 10ರೂ.ಗೆ ನೀಡುತ್ತಿದ್ದಾರೆ. ರೈತರಿಗೆ ಕಡಿಮೆ ಬಲೆಯಲ್ಲಿ ರಸ ಗೊಬ್ಬರ ನೀಡುತ್ತಿದ್ದೆವೆ, ರಸ್ತೆ ,ರೇಲ್ವೆ ಯೋಜನೆ ಕಾರ್ಯಗಳು ಭರದಿಂದ ಸಾಗುತ್ತಿವೆ, ದೇಶದ ಜನತೆಗೆ ದಿನದ 24 ಗಂಟೆ ವಿದ್ಯುತ್ ಕೊಡಲು ಪ್ರಧಾನ ಮಂತ್ರಿಯವರು ಶ್ರಮಿಸುತ್ತಿದ್ದಾರೆ, ಮಹಿಳೆಯರಿಗೆ ಬ್ಯಾಂಕಿನಲ್ಲಿ ಯಾವುದೇ ಜಾಮೀನು ಇಲ್ಲದೆ 1ಲಕ್ಷದಿಂದ 30ಲಕ್ಷ ನೀಡುವ ಮುದ್ರಾ ಯೋಜನೆ ಜಾರಿಗೊಳಿಸಿದ್ದಾರೆ.

ಕೇಂದ್ರ ಸಚಿವ ಅನಂತಕುಮಾರ್ ಹೆಗ್ಡೆ ಅವರು ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿಯ ಪರಿವರ್ತನಾ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಆಧುನಿಕ ಭಸ್ಮಾಸುರ ಅವರೇ ಕಾಂಗ್ರೆಸ್ ಪಕ್ಷವನ್ನು ಸರ್ವ ನಾಶ ಮಾಡುತ್ತಿದ್ದಾರೆ. ದೇಶದಲ್ಲಿ ಹಿಂದೂ, ಮುಸ್ಲಿಂ,ಕ್ರಿಶ್ಚಿಯನ್ನರು ಸಮಾನತೆಯಿಂದ ಬದುಕಬೇಕು. ರೈ ತಾಪಿ ವರ್ಗ ನೆಮ್ಮದಿಯ ಜೀವನ ನಡೆಸಬೇಕು ಎಂಬ ಆಶಯದೊಂದಿಗೆ ರಾಜ್ಯವನ್ನು ಕಾಂಗ್ರೆಸ್ ಮುಕ್ತಗೊಸಲು 150 ಸ್ಥಾನಗಳ ಗುರಿ ನೀಡಿದ್ದಾರೆ.

ಈ ಕೆಲಸವನ್ನು ನಾವು ಪರಿವರ್ತನಾ ಯಾತ್ರೆ ಮೂಲಕ ಮಾಡುತ್ತಿದ್ದೇವೆ. ಬಿಜೆಪಿ ಪರಿವರ್ತನಾ ಯಾತ್ರೆ ಬಗ್ಗೆ ಏನೇನೂ ಮಾತನಾಡಲು ಆರಂಭಿಸಿರುವ ಸಿದ್ದರಾಮಯ್ಯ ಅವರು ನಮ್ಮ ಯಾತ್ರೆಯನ್ನು ಹಿಂಬಾಲಿಸಿ ಸರ್ಕಾರಿ ಪ್ರವಾಸ ಕೈಗೊಳ್ಳಲು ಹೊರಟಿದ್ದಾರೆ. ರಾಜ್ಯದೆಲ್ಲೆಡೆ ಬಿಜೆಪಿ ಅಲೆ ಎದ್ದಿದ್ದು ಯಡಿಯೂರಪ್ಪ ಬೇಕು, ಸಿದ್ದರಾಮಯ್ಯ ಸಾಕು ಎಂಬ ಭಾವನೆ ರಾಜ್ಯದ ಜನತೆಗೆ ಮನೆ ಮಾಡಿದೆ. ಕಾಂಗ್ರೆಸ್ ಮುಕ್ತ ಭಾರತಕ್ಕಾಗಿ 2018ರಲ್ಲಿ ರಾಜ್ಯದಲ್ಲಿ ನಡೆಯುವ ಚುನಾವಣೆಯಲ್ಲಿ ಜನತೆ ಕಾಂಗ್ರೆಸ್ ಸರ್ಕಾರಕ್ಕೆ ಕೊನೆಯ ಮೊಳೆ ಹಾಕಬೇಕು ಎಂದರು.

ಈ ಸಂದರ್ಭದಲ್ಲಿ ಪಕ್ಷದ ಉಪಾಧ್ಯಕ್ಷ ಸಂಸದ ಶ್ರೀರಾಮಲು, ಸಂಸದರಾದ ಶೋಭಾ ಕರಂದ್ಲಾಜೆ, ಶ್ರೀರಾಮುಲು, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಜಯಪ್ರಕಾಶ ಹೆಗ್ಡೆ, ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಬಿ. ಎಂ. ಸುಕುಮಾರ ಶೆಟ್ಟಿ ಮಾತನಾಡಿ ಕೇಂದ್ರದ ಮೋದಿ ಸರ್ಕಾರದ ಸಾಧನೆ, ಜನಪರ ಕಾರ್ಯ ಮತ್ತು ರಾಜ್ಯ ಕಾಂಗ್ರೆಸ್ ಸರ್ಕಾರದ ಕಳಪೆ ನಿರ್ವಹಣೆ, ಭ್ರಷ್ಟಾಚಾರಗಳ ಪಟ್ಟಿ ಮುಂದಿಟ್ಟರು.

ಬೈಂದೂರು ಕ್ಷೇತ್ರ ಸಮಿತಿ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿದರು. ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕ್ಷೇತ್ರ ಕಾರ್ಯದರ್ಶಿ ದೀಪಕ್‍ಕುಮಾರ ಶೆಟ್ಟಿ ನಿರೂಪಿಸಿದರು. ಬಿಜೆಪಿ ಮಹಿಳಾ ಮೋಚಾ ಅಧ್ಯಕ್ಷೆ ಪ್ರಿಯದರ್ಶಿನಿ ದೇವಾಡಿಗ ಬೆಸ್ಕೂರು ಧನ್ಯವಾದಗೈದರು. ಪ್ರಮುಖರಾದ ರಘುಪತಿ ಭಟ್, ಭಾರತಿ ಶೆಟ್ಟಿ, ದಿವಾಕರ ಬಾಬು, ಕೆ. ಲಕ್ಷ್ಮೀನಾರಾಯಣ, ನರಸಿಂಹಮೂರ್ತಿ, ಮೊದಲಾದವರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)