ತ್ರಾಸಿ ಕೊಂಕಣಿ ಖಾರ್ವಿ ಭವನಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭೇಟಿ

0
150
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ ನ.14 : ಹೊಸಾಡು-ತ್ರಾಸಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 66ರ ಸಮೀಪ ಸುಮಾರು 9 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಕೊಂಕಣಿ ಖಾರ್ವಿ ಭವನಕ್ಕೆ ರಾಜ್ಯದ ಮಾಜಿ ಮುಖ್ಯಮಂತ್ರಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೋಮವಾರ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ, ಸರಕಾರದ ಹಾಗೂ ದಾನಿಗಳ ನೆರವಿನಿಂದ ನಿರ್ಮಿಸಲಾಗಿರುವ ಸುಸಜ್ಜಿತ ಕೊಂಕಣಿ ಖಾರ್ವಿ ಶೈಕ್ಷಣಿಕ ಸಾಂಸ್ಕøತಿಕ ಸಮುದಾಯ ಭವನದ ಸದುಪಯೋಗ ಎಲ್ಲರಿಗೂ ದೊರೆಯುವಂತಾಗಬೇಕು. ಹಿಂದುಳಿದ ಖಾರ್ವಿ ಸಮಾಜದ ಅಭಿವೃದ್ಧಿಗಾಗಿ ಹಿಂದಿನ ಬಿಜೆಪಿ ಸರ್ಕಾರ ಒಂದು ಕೋಟಿ ರೂ. ಅನುದಾನ ನೀಡಿದ್ದು, ಮುಂದಿನ ದಿನಗಳಲ್ಲಿ ಸಮಾಜದ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು. ಪರಿವರ್ತನಾ ಯಾತ್ರೆಯ ಹಿನ್ನಲೆಯಲ್ಲಿ ಭವನದ ಉದ್ಘಾಟನಾ ಸಮಾರಂಭಕ್ಕೆ ಬರಲು ಅನಾನುಕೂಲವಾಗುತ್ತಿದ್ದು, ಸದಾ ನಿಮ್ಮ ಜೊತೆಗಿರುವುದಾಗಿ ಹೇಳಿದರು.

ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ, ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಅಖಿಲ ಭಾರತ ಕೊಂಕಣಿ ಖಾರ್ವಿ ಮಹಾಜನ ಸಭಾದ ಅಧ್ಯಕ್ಷ ಕೆ.ಬಿ.ಖಾರ್ವಿ ಕುಂದಾಪುರ, ಪ್ರಧಾನ ಕಾರ್ಯದರ್ಶಿ ಉಮಾನಾಥ ಗಂಗೊಳ್ಳಿ, ರವಿ ಟಿ.ನಾಯ್ಕ್, ಪ್ರಕಾಶ ಖಾರ್ವಿ ಕುಂದಾಪುರ, ದಿನಕರ ಪಟೇಲ್, ಸೂರ್ಯಕಾಂತ ಖಾರ್ವಿ, ಜಿ.ಗಣಪತಿ ಶಿಪಾೈ, ನಾಗರಾಜ ಖಾರ್ವಿ ಕೊಲ್ಲೂರು, ಮಾಧವ ಖಾರ್ವಿ ಕಂಚುಗೋಡು, ನಾಗಪ್ಪಯ್ಯ ಪಟೇಲ್, ಸುರೇಖಾ ಕಾನೋಜಿ, ಕೃಷ್ಣ ಖಾರ್ವಿ ಕಂಚುಗೋಡು ಮತ್ತಿತರರು ಉಪಸ್ಥಿತರಿದ್ದರು.

ವರದಿ : ಬಿ.ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)