ಕೊಲ್ಲೂರು ದೇವಳಕ್ಕೆ ಪುದುಚೇರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಭೇಟಿ

0
605

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಕೊಲ್ಲೂರು : ಪುದುಚೇರಿ ಮುಖ್ಯಮಂತ್ರಿ ವಿ. ನಾರಾಯಣ ಸ್ವಾಮಿ ಭಾನುವಾರ ಕೊಲ್ಲೂರಿಗೆ ಆಗಮಿಸಿ ಜ 1ರ ಸೋಮವಾರ ಮೂಕಾಂಬಿಕಾ ದೇವಳದಲ್ಲಿ ವಿಶೇಷ ಪೂಜೆ ಮತ್ತು ಹೋಮ ಹವನಗಳನ್ನ ಸಲ್ಲಿಸಿದರು.

ಮೂಕಾಂಬಿಕೆಗೆ ವಿಶೇಷ ಪೂಜೆ, ಕುಂಕುಮಾರ್ಚನೆ ನೆರವೇರಿಸಿದರು. ನಂತರ 8 ಗಂಟೆ ಸುಮಾರಿಗೆ ಮೂಕಾಂಬಿಕೆ ಸನ್ನಿಧಿಯಲ್ಲಿ ತುಲಾಭಾರ ಸೇವೆ ಮತ್ತು ಚಂಡಿಕಾ ಹೋಮವನ್ನ ನೇರವೇರಿಸಿದರು. ಈ ಹಿಂದೆ ಕೂಡ ಕೊಲ್ಲೂರಿಗೆ ಭೇಟಿ ನೀಡಿದ್ದ ಅವರು ಚಂಡಿಕಾ ಹೋಮವನ್ನ ನೇರವೇರಿಸಿದ್ದರು ಎನ್ನಲಾಗಿದೆ.

ದೇವಳದ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತ ಸದಸ್ಯ ಕೆ.ರಮೇಶ್ ಗಾಣಿಗ, ನರಸಿಂಹ ಹಳಗೇರಿ ಮೊದಲಾದವರು ಮುಖ್ಯಮಂತ್ರಿಗಳಿಗೆ ಪೂರ್ಣಕುಂಭ ಸ್ವಾಗತಕೋರಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (2) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)