ನಮ್ಮ ಬೈಂದೂರು ತಾಲೂಕು ಕಾರ್ಯಾರಂಭವಾಗಿದೆಯೇ?

0
2305

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಹೊಸವರ್ಷದ ಆರಂಭದಿಂದಲೇ ಹೊಸ ತಾಲೂಕುಗಳ ಕಾರ್ಯಾರಂಭ!?.

ಬೆಂಗಳೂರು: ನೂತನ 50 ತಾಲೂಕುಗಳು ಈ ತಿಂಗಳಲ್ಲೇ ಕಾರ್ಯಾರಂಭ ಮಾಡಲಿವೆ. ಇದಕ್ಕೆ ಪೂರಕವಾಗಿ ಪ್ರತಿ ತಾಲೂಕುಗಳಿಗೂ ಐದು ಕೋಟಿ ರೂ.ಗಳಂತೆ ಒಟ್ಟಾರೆ 250 ಕೋಟಿ ರೂ. ಬಿಡುಗಡೆ ಮಾಡುವುದಾಗಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು, ಮೂರ್ನಾಲ್ಕು ತಾಲೂಕುಗಳನ್ನು ಹೊರತುಪಡಿಸಿದರೆ ಉಳಿದಂತೆ ಎಲ್ಲ ತಾಲೂಕುಗಳಲ್ಲೂ ಮೂಲಭೂತ ಸೌಕರ್ಯವಿದೆ. ಹೀಗಾಗಿ ಹೊಸ ತಾಲೂಕುಗಳು ಈ ತಿಂಗಳಲ್ಲಿ ಕಾರ್ಯಾರಂಭ ಮಾಡಲು ಯಾವ ತೊಂದರೆಯೂ ಇಲ್ಲ ಎಂದು ಹೇಳಿದರು
ತಹಸೀಲ್ದಾರ್ ಕಚೇರಿ ಸೇರಿದಂತೆ ಹೊಸ ತಾಲೂಕುಗಳ ರಚನೆಗೆ ಅಗತ್ಯವಾದ ಎಲ್ಲ ಸೌಲಭ್ಯಗಳು ಇವೆ. ಈಗಾಗಲೇ ಇದಕ್ಕೆ ಪೂರಕವಾಗಿ ಎಲ್ಲ ಕೆಲಸಗಳನ್ನು ಮಾಡಲಾಗಿದೆ. ಹೀಗಾಗಿ ನೂತನ ತಾಲೂಕುಗಳು ಅಸ್ತಿತ್ವಕ್ಕೆ ಬರಲು ತಯಾರಿ ನಡೆದಿಲ್ಲ ಎಂಬ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರ ಮಾತು ನಿರಾಧಾರ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಈ ವರದಿ ಓದಿದ ಬೈಂದೂರು ತಾಲೂಕ್ ಪ್ರಜೆಗಳು ಹಾಗೂ ನಿವಾಸಿಗಳು ತಮ್ಮ ತಮ್ಮ ಅನಿಸಿಕೆಗಳನ್ನು ಇಲ್ಲಿ comment ನಲ್ಲಿ ವ್ಯಕ್ತ ಪಡಿಸಿ  ಅಥವ editorbyndoor@gmail.com ಇ ಮೈಲ್ ಗೆ ಕೂಡಲೇ ಕಳಿಸಿರಿ

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

B.G.Mohandas (ಬೀಜಿ)

B.G.Mohandas; M.Pharm FAGE DBM Founder ; GulfKannadiga.com & Kannadigaworld.com; kollur.com, devadiga.com & byndoor.com | Formerly Head of Pharmacy at Gulf Medical University, Dubai & Professor KMC Manipal