ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಸಂಸ್ಥಾಪಕರ ದಿನಾಚರಣೆ: ಬೈಂದೂರಿನ ಉದ್ಯಮಿ ಕೆ.ವೆಂಕಟೇಶ ಕಿಣಿ ಅವರಿಗೆ ಸನ್ಮಾನ

0
139

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ : ಗಂಗೊಳ್ಳಿಯ ಪೇಟೆ ಶ್ರೀ ವಿಠಲ ರಕುಮಾಯಿ ದೇವಸ್ಥಾನದ ಶ್ರೀ ವೀರ ವಿಠಲ ಸಭಾಗೃಹದಲ್ಲಿ ಭಾನುವಾರ ಜರಗಿದ ಗಂಗೊಳ್ಳಿ ಟೌನ್ ಸೌಹಾರ್ದ ಸಹಕಾರಿ ನಿಯಮಿತದ ಸಂಸ್ಥಾಪಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬೈಂದೂರಿನ ಉದ್ಯಮಿ ಕೆ.ವೆಂಕಟೇಶ ಕಿಣಿ ಅವರನ್ನು ಸನ್ಮಾನಿಸಲಾಯಿತು.

ಸಾಲಿಗ್ರಾಮದ ಶ್ರೀ ಗುರುನರಸಿಂಹ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ಅಧ್ಯಕ್ಷ, ಮತ್ಸ್ಯೋದ್ಯಮಿ ಆನಂದ ಸಿ.ಕುಂದರ್ ಅವರು ವೆಂಕಟೇಶ ಕಿಣಿ ಅವರನ್ನು ಸನ್ಮಾನಿಸಿದರು. ಸಹಕಾರಿಯ ಅಧ್ಯಕ್ಷ ಎಚ್.ಗಣೇಶ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಸಹಕಾರಿಯ ಉಪಾಧ್ಯಕ್ಷ ಜಿ.ವಿಶ್ವನಾಥ ಆಚಾರ್ಯ, ನಿರ್ದೇಶಕರಾದ ಜಿ.ವೆಂಕಟೇಶ ನಾಯಕ್, ಜಿ.ವೆಂಕಟೇಶ ಶೆಣೈ, ಬಿ.ರಾಘವೇಂದ್ರ ಪೈ, ಉದಯಶಂಕರ ರಾವ್, ನಾರಾಯಣ ಪೂಜಾರಿ, ಮಹಾಬಲ ಪೂಜಾರಿ, ವತ್ಸಲಾ ಎಸ್.ಕಾಮತ್, ಮಾಲಾ ಕೆ.ನಾಯಕ್, ಕಾರ್ಯನಿರ್ವಹಣಾಧಿಕಾರಿ ಗಣೇಶ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

ವರದಿ : ಬಿ.ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia