ಸುಪ್ರೀಂ ಜಡ್ಜ್‌ಗಳ ಆರೋಪದ ಬೆನ್ನಲ್ಲೇ ಎಜೆ ಜೊತೆ ಸಿಜೆಐ ಸಭೆ!?

0
163
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ನವದೆಹಲಿ: ಸುಪ್ರೀಂ ಆಡಳಿತ ವ್ಯವಸ್ಥೆಯ ಬಗ್ಗೆ ಹಾಗೂ ತಮ್ಮ ವಿರುದ್ಧ ಸುಪ್ರೀಂ ನ್ಯಾಯಮೂರ್ತಿಗಳು ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಬೆನ್ನಲ್ಲೇ ಸಿಜೆಐ ದೀಪಕ್ ಮಿಶ್ರಾ ಅವರು ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ್ ಜೊತೆ ಮಾತುಕತೆ ನಡೆಸಲು ಸಭೆ ಕರೆದಿದ್ದಾರೆ.

ಸುಪ್ರೀಂ ನ್ಯಾಯಮೂರ್ತಿಗಳಾದ ಚೆಲ್ಮೇಶ್ವರ್, ರಂಜನ್ ಗೊಗೋಯಿ, ಮದನ್ ಲೋಕೂರ್ ಹಾಗೂ ಕುರಿಯನ್ ಜೋಸೆಫ್ ಇಂದು ಸುದ್ದಿಗೋಷ್ಟಿ ನಡೆಸಿ ಸುಪ್ರೀಂ ವ್ಯವಸ್ಥೆಯ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ. ಅಂತೆಯೇ ಈ ಬಗ್ಗೆ ಚರ್ಚಿಸಲು ಅಟಾರ್ನಿ ಜನರಲ್ ಜೊತೆ ಸಿಜೆಐ ದೀಪಕ್ ಮಿಶ್ರಾ ಸಭೆ ನಡೆಸಿ, ಮುಂದಿನ ನಡೆಯ ಬಗ್ಗೆ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.

ಇನ್ನು ಸುಪ್ರೀಂ ಜಡ್ಜ್‌ಗಳ ಆರೋಪ ತೀವ್ರ ಸಂಚಲನ ಮೂಡಿಸಿದ್ದರಿಂದ ಕೇಂದ್ರ ಕಾನೂನು ಸಚಿವ ರವಿ ಶಂಕರ್ ಪ್ರಸಾದ್ ಅವರು ಪ್ರಧಾನಿ ಮೋದಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)