ಶಕ್ತಿನಗರದಲ್ಲಿ ಪೊಲೀಸ್ ವಸತಿಗೃಹ ಕಟ್ಟಡಕ್ಕೆ ಸಚಿವ ರಾಮಲಿಂಗಾ ರೆಡ್ಡಿ ಶಿಲಾನ್ಯಾಸ

0
129
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮಂಗಳೂರು: ನಗರದ ಶಕ್ತಿನಗರದಲ್ಲಿ 6.90 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಪೊಲೀಸ್ ವಸತಿಗೃಹಗಳ ಕಟ್ಟಡಕ್ಕೆ ಗೃಹ ಸಚಿವ ರಾಮಲಿಂಗಾ ರೆಡ್ಡಿ ಅವರು ಇಂದು ಶಿಲಾನ್ಯಾಸಗೈದರು.

ಈ ಸಂದರ್ಭದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಈ ವಸತಿಗೃಹವು 24 ಪಿಸಿ ಹಾಗೂ 8 ಎಸ್ಐಗಳಿಗೆ ವಸತಿ ಸೌಲಭ್ಯವನ್ನು ಕಲ್ಪಿಸಲಿದೆ ಎಂದರು.

ರಾಜ್ಯ ಸರಕಾರ ಪೊಲೀಸ್ ವಸತಿ ಗೃಹ 2020 ಯೋಜನೆಯಡಿ ಐದು ವರ್ಷದಲ್ಲಿ ವಿವಿಧ ಜಿಲ್ಲೆಗಳಲ್ಲಿ 11,000 ವಸತಿ ಗೃಹ ನಿರ್ಮಾಣ ಮಾಡಲು ಅನುಮೋದನೆ ನೀಡಿದೆ. 2500 ಕ್ಕೂ ಅಧಿಕ ಮನೆಗಳನ್ನು ಈಗಾಗಲೇ ಹಸ್ತಾಂತರಿಸಲಾಗಿದೆ. 4500 ಮನೆಗಳು ಕಾಮಗಾರಿ ಮುಗಿಯುವ ಹಂತದಲ್ಲಿದೆ. ಈ ವರ್ಷ 4500 ಮನೆಗಳ ನಿರ್ಮಾಣ ಕಾಮಗಾರಿ ಆರಂಭವಾಗಿದೆ. ಮಂಗಳೂರು ನಗರದಲ್ಲಿ ಒಟ್ಟು 160 ವಸತಿಗೃಹ ಮಂಜೂರಾಗಿದ್ದು, ನಿರ್ಮಾಣ ಕೆಲಸ ನಡೆಯುತ್ತಿದೆ. ಈ ಬಾರಿಯ ಬಜೆಟ್ನಲ್ಲಿ ಹೊಸ ಮನೆಗಳ ನಿರ್ಮಾಣದ ಜತೆಗೆ ಹಳೆಯ ಮನೆಗಳ ದುರಸ್ತಿಗೆ ಆದ್ಯತೆ ನೀಡಲಾಗುತ್ತಿದೆ. 16 ತಿಂಗಳಲ್ಲಿ ಈ ವಸತಿಗೃಹದ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಅವರು ಹೇಳಿದರು.
ಈ ಸಂದರ್ಭ ಶಾಸಕ ಜೆ.ಆರ್. ಲೋಬೋ, ಮೇಯರ್ ಕವಿತಾ ಸನಿಲ್, ಸ್ಥಳೀಯ ಕಾರ್ಪೊರೇಟರ್ ಅಖಿಲಾ ಆಳ್ವಾ, ಮನಪಾ ಸದಸ್ಯಭಾಸ್ಕರ ಮೊಯ್ಲಿ, ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹರೀಶ್ ಕುಮಾರ್, ಟಿ.ಕೆ. ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)