ಗಾಂಜಾ ಸಾಗಿಸುತ್ತಿದ್ದ ಕಾರು ಡಿಕ್ಕಿ: ಓರ್ವ ಸಾವು

0
113

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ರಾಯಚೂರು: ರಸ್ತೆ ಬದಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಮೃತಪಟ್ಟಿದ್ದು, ಮತ್ತೊರ್ವ ಗಾಯಗೊಂಡ ಘಟನೆ ನಡೆದಿದೆ.

ಮಾನ್ವಿಯ ಪೂಜಾ ರೈಸ್ ಮಿಲ್ ಹತ್ತಿರ ಈ ಘಟನೆ ನಡೆದಿದೆ. ಪಟ್ಟಣದ ಜನತಾ ಕಾಲನಿ ನಿವಾಸಿ ಚಂದ್ರಶೇಖರ್ (25) ಮೃತಪಟ್ಟ ವ್ಯಕ್ತಿ. ಘಟನೆಯಲ್ಲಿ ಗಾಯಗೊಂಡಿರುವ ರವಿ ಕುಮಾರ್ (25) ಎಂಬುವವರನ್ನು ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೆಂಗಳೂರು ಮೂಲದ ಮೂವರು ಗಾಂಜಾ ಖರೀದಿಸಿಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಅಪಘಾತದ ಬಳಿಕ ಮೂವರು ಆರೋಪಿಗಳು ಪರಾರಿಯಾಗಲು ಯತ್ನಿಸಿದ್ದರು. ಈ ವೇಳೆ ಸ್ಥಳೀಯರು ಹೃಷಿಕೇಶ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಇನ್ನಿಬ್ಬರು ಪರಾರಿಯಾಗಿದ್ದಾರೆ.

ಬಂಧಿತನಿಂದ 1 ಕೆ.ಜಿ. ಗಾಂಜಾ ವಶಕ್ಕೆ ಪಡೆಯಲಾಗಿದೆ. ಘಟನೆ ಸಂಬಂಧ ಮಾನ್ವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)