ಅನುರಾಗ್‍ ತಿವಾರಿ ಹತ್ಯೆಯಲ್ಲಿ ಸಿಎಂ ಸಿದ್ದರಾಮಯ್ಯನವರ ಕೈವಾಡ..?!

0
130
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ನವದೆಹಲಿ, ಮಾ.8- ಐಎಎಸ್ ಅಧಿಕಾರಿ ಅನುರಾಗ್‍ತಿವಾರಿ ಹತ್ಯೆ ಪ್ರಕರಣ ಸಂಬಂಧದಲ್ಲಿ ಸಿಬಿಐ ತನಿಖಾ ವೈಖರಿಯಿಂದ ತಮಗೆ ತೀವ್ರ ತೊಂದರೆಯಾಗುತ್ತಿದೆ ಎಂದು ಅವರ ತಂದೆ ಬಿ.ಎನ್.ತಿವಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೋಪಿಗಳನ್ನು ರಕ್ಷಿಸಲು ಸಿಬಿಐ ಅಧಿಕಾರಿಗಳಿಂದ ತಮಗೆ ಇನ್ನಿಲ್ಲದ ಕಿರಕುಳ ನೀಡಲಾಗುತ್ತಿದೆ ಎಂದು ಸುದ್ದಿಗಾರರೊಂದಿಗೆ ಅವರು ತೀವ್ರ ಬೇಸರ ತೋಡಿಕೊಂಡಿದ್ದಾರೆ. ತಮ್ಮ ಮಗನ ಕೊಲೆಯಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ಸಿಬಿಐನವರು ನಮ್ಮ ಕುಟುಂಬದವರನ್ನು ವಿಚಾರಣೆಗೊಳಪಡಿಸಿದ್ದರು. ಜತಗೆ ನನ್ನ ಮಗನ ಮನೆಯಲ್ಲಿದ್ದ ವಸ್ತುಗಳನೆಲ್ಲಾ ತೆಗೆದುಕೊಂಡು ಹೋಗಿದ್ದಾರೆ ಎಂದು ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ಅವರ ತಾಯಿ ಸುಶೀಲ ದೂರಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)