‘ಅಧಿಕಾರದಲ್ಲಿದ್ದಾಗ ಏನೂ ಮಾಡದೆ ಈಗ ಹಾಸ್ಟೆಲ್‌ ಬಗ್ಗೆ ಸುಳ್ಳು ಹೇಳುವ ಬಿಜೆಪಿ’

0
150
dinetmedia

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಮೈಸೂರು: ಈ ಹಿಂದೆ ಅಧಿಕಾರದಲ್ಲಿದ್ದಾಗ ಏನೂ ಮಾಡದ ಬಿಜೆಪಿಯವರು ಈಗ ಚುನಾವಣೆ ಹಿನ್ನೆಲೆಯಲ್ಲಿ ಸುಳ್ಳು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಸುಳ್ಳು ವರದಿಗಳನ್ನು ತಯಾರು ಮಾಡಿಕೊಂಡು ಓಡಾಡುತ್ತಿದ್ದಾರೆ. ನಮ್ಮ ಸರಕಾರ ಹಾಸ್ಟೆಲ್‌ಗಳನ್ನು ಅಭಿವೃದ್ಧಿ ಮಾಡಿದಷ್ಟು ಹಿಂದಿನ ಯಾವ ಸರಕಾರಗಳೂ ಮಾಡಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಕಾವೇರಿ ಜಲ ವಿವಾದ ಸಂಬಂಧ ನಮ್ಮ ವಕೀಲರ ತಂಡದ ಸಲಹೆ ಪ್ರಕಾರವೇ ಮುಂದಿನ ಹೆಜ್ಜೆ ಇಡಲಾಗುವುದು. ಅಧಿಕಾರಿಗಳೊಂದಿಗೆ ಹೇಗೆ ನಡೆದುಕೊಳ್ಳಬೇಕು, ಅಧಿಕಾರಿಗಳಿಂದ ಹೇಗೆ ಕೆಲಸ ಮಾಡಿಸಬೇಕು ಎಂಬುದನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಂದ ಕಲಿಯಬೇಕಿಲ್ಲ. ಕುಮಾರಸ್ವಾಮಿಯವರು ರಾಜಕೀಯಕ್ಕೆ ಬರುವ ಮೊದಲೇ ನಾನು ಮಂತ್ರಿಯಾಗಿದ್ದೆ.ಚುನಾವಣೆ ಸಮೀಪಿಸುತ್ತಿರುವಾಗ ಕುಮಾರಸ್ವಾಮಿಯವರು ಏನೇನೋ ಸುಳ್ಳು ಹೇಳಿಕೊಂಡು ಓಡಾಡುತ್ತಿದ್ದಾರೆ ಎಂದರು.

ಕಾಡಾನೆ ದಾಳಿಯಿಂದ ಇತ್ತೀಚೆಗೆ ಸಾವಿಗೀಡಾದ ಐಎಫ್ ಎಸ್ ಅಧಿಕಾರಿ ಕುಟುಂಬದವರಿಗೆ ಸರಕಾರ ನೆರವು ಒದಗಿಸಲಿದೆ. ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಈ ತಿಂಗಳ 24,25ರಂದು ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. 25ರಂದು ಸಂಜೆ 4 ಗಂಟೆಗೆ ಮೈಸೂರಿನ ಮಹಾರಾಜ ಮೈದಾನದಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಅವರು ಭಾಷಣ ಮಾಡಲಿದ್ದಾರೆ ಎಂದು ಸಿಎಂ ಹೇಳಿದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)