ಗಂಗೊಳ್ಳಿ ಗ್ರಾಮ ಪಂಚಾಯತ್‍ನ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ

0
54

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಗಂಗೊಳ್ಳಿ : ಮಹಿಳೆಯರು ಮತ್ತು ಮಕ್ಕಳು ತಮ್ಮ ಮತ್ತು ಮಕ್ಕಳ ಮೇಲೆ ಆಗಬಹುದಾದ ಆಗುತ್ತಿರುವ ಶೋಷಣೆಗಳಿಂದ ರಕ್ಷಣೆ ಪಡೆದುಕೊಳ್ಳಲು ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆ ಉತ್ತಮ ವೇದಿಕೆಯಾಗಿದೆ. ತಮ್ಮ ಸಮಸ್ಯೆಗಳನ್ನು ಗ್ರಾಮ ಪಂಚಾಯತ್ ಮುಂದೆ ಹೇಳಿಕೊಳ್ಳಲು, ತಮ್ಮ ಮೇಲೆ ಆಗುತ್ತಿರುವ ಶೋಷಣೆಗಳ ವಿರುದ್ಧ ರಕ್ಷಣೆ ಪಡೆಯಲು, ತಮ್ಮ ಮೇಲೆ ಯಾವುದೇ ರೀತಿಯ ಶೋಷಣೆ ಆಗದಂತೆ ತೆಗೆದುಕೊಳ್ಳಬಹುದಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಚರ್ಚೆ ನಡೆಸಲು ಮಹಿಳೆಯರು ಮತ್ತು ಮಕ್ಕಳಿಗೆ ಸರಕಾರ ಉತ್ತಮ ವೇದಿಕೆಯನ್ನು ನಿರ್ಮಿಸಿದೆ ಎಂದು ಜಿಲ್ಲಾ ಪಂಚಾಯತ್ ಸದಸ್ಯೆ ಶೋಭಾ ಜಿ.ಪುತ್ರನ್ ಹೇಳಿದರು.

ಗಂಗೊಳ್ಳಿಯ ಶ್ರೀ ವೀರೇಶ್ವರ ಮಾಂಗಲ್ಯ ಮಂದಿರದಲ್ಲಿ ಗುರುವಾರ ಜರಗಿದ ಗಂಗೊಳ್ಳಿ ಗ್ರಾಮ ಪಂಚಾಯತ್‍ನ ಮಹಿಳಾ ಮತ್ತು ಮಕ್ಕಳ ಗ್ರಾಮ ಸಭೆಯಲ್ಲಿ ಅವರು ಮಾತನಾಡಿದರು.

ಗಂಗೊಳ್ಳಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸೀತಾರಾಮ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನ್ಯಾಯವಾದಿ ಅಂಜಲಿ ಹುಂಡೇಕರ್ ಮಹಿಳಾ ದಿನಾಚರಣೆ ಬಗ್ಗೆ ಮಾತನಾಡಿದರು. ಗ್ರಾಪಂ ಸದಸ್ಯ, ಮಕ್ಕಳ ಮಿತ್ರ ಬಿ.ಲಕ್ಷ್ಮೀಕಾಂತ ಮಡಿವಾಳ, ಅಂಗನವಾಡಿ ಕಾರ್ಯಕರ್ತೆ ಹಾಗೂ ಮಹಿಳಾ ಮಿತ್ರ ಫಿಲೋಮಿನಾ ಫೆರ್ನಾಂಡಿಸ್, ಶಿಶು ಅಭಿವೃದ್ಧಿ ಇಲಾಖೆಯ ಮೇಲ್ವಿಚಾರಕಿ ಸವಿತಾ ಶೆಟ್ಟಿ, ಆರೋಗ್ಯ ಇಲಾಖೆಯ ಕಿರಿಯ ಸಹಾಯಕಿ ಅರ್ಪಿತಾ, ಗ್ರಾಪಂ ಸದಸ್ಯರಾದ ಅಬ್ದುಲ್ ಹಾದಿ, ಸರೋಜಿನಿ ಕೋಡಿಕಾರ್, ಶಾರದಾ ಶೇರುಗಾರ್, ರೋಜಿ ಫೆರ್ನಾಂಡಿಸ್, ಮಕ್ಕಳ ಮಿತ್ರರು ಮತ್ತಿತರರು ಉಪಸ್ಥಿತರಿದ್ದರು.

ಇದೇ ಸಂದರ್ಭ ಜಿಲ್ಲಾ ಉತ್ತಮ ಆಶಾ ಕಾರ್ಯಕರ್ತೆ ಪ್ರಶಸ್ತಿ ವಿಜೇತ ಕಲ್ಪನಾ ಯಾನೆ ಜ್ಯೋತಿ ಶೇರುಗಾರ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ತಾಲೂಕು ಮತ್ತು ಜಿಲ್ಲಾ ಮಟ್ಟದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಗ್ರಾಪಂ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಬಿ.ಮಾಧವ ಸ್ವಾಗತಿಸಿದರು. ನಮ್ಮ ಭೂಮಿ ಸಂಸ್ಥೆಯ ಶಾರದಾ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪಂಚಾಯತ್ ಸಿಬ್ಬಂದಿಗಳಾದ ನಾರಾಯಣ ಶ್ಯಾನುಭಾಗ್ ಕಾರ್ಯಕ್ರಮ ನಿರೂಪಿಸಿದರು. ಸಂದೀಪ ಖಾರ್ವಿ ವಂದಿಸಿದರು.

ವರದಿ : ಬಿ.ನರಸಿಂಹ ನಾಯಕ್ ಉಪ್ಪುಂದ

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia