ಸ.ಪ್ರ.ದರ್ಜೆ ಕಾಲೇಜು ಬೈಂದೂರು ವಾರ್ಷಿಕ ಕ್ರೀಡಾಕೂಟ

0
136

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಬೈಂದೂರು ,ಏ.14: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಇದರ ವಾರ್ಷಿಕ ಕ್ರೀಡಾಕೂಟ ಕಾಲೇಜು ಮೈದಾನದಲ್ಲಿ ನಡೆಯಿತು.

ವಾಣಿಜ್ಯ ಶಾಸ್ತ್ರ ವಿಭಾಗದ ಮುಖ್ಯಸ್ಥ, ಸಹಾಯಕ ಪ್ರಾಧ್ಯಾಪಕ ರಘು ನಾಯ್ಕ ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಪ್ರೋ. ಬಿ.ಎ. ಮೇಳಿ ಅಧ್ಯಕ್ಷತೆ ವಹಿಸಿದ್ದರು.ಈ ಸಂದರ್ಭದಲ್ಲಿ ಮಾತನಾಡಿದ ಅವರು ಪಾಠದ ಜೊತೆ ಕ್ರೀಡೆಯು ಸಹ ಮುಖ್ಯವಾಗಿರುತ್ತದೆ.ಗ್ರಾಮೀಣ ಭಾಗದಲ್ಲಿ ಉತ್ತಮ ಪ್ರತಿಭೆ ಇರುವ ಕ್ರೀಡಾಪಟುಗಳಿದ್ದಾರೆ.ಕಾಲೇಜಿನಲ್ಲಿ ನಿರಂತರವಾಗಿ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲಾಗುತ್ತಿದೆ. ವಿಶ್ವವಿದ್ಯಾನಿಲಯ ಹಾಗೂ ರಾಜ್ಯಮಟ್ಟದ ಕ್ರೀಡಾಕೂಟಗಳಲ್ಲಿ ಇಲ್ಲಿನ ವಿದ್ಯಾರ್ಥಿಗಳು ಪ್ರಶಸ್ತಿ ಪಡೆದಿದ್ದಾರೆ ಎಂದರು. ಕನ್ನಡ ವಿಭಾಗದ ಮುಖ್ಯಸ್ಥ ನಾಗರಾಜ ಶೆಟ್ಟಿ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.

ಸತೀಶ ಕುಮಾರ್ ಸ್ವಾಗತಿಸಿದರು.ಸಹಾಯಕ ಪ್ರಾಧ್ಯಾಪಕ ನವೀನ್ ಕುಮಾರ್ ಕಾರ್ಯಕ್ರಮ ನಿರ್ವಹಿಸಿದರು. ಶಿವಕುಮಾರ ಪಿ. ವಂದಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)