65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಹೆಬ್ಬೆಟ್ಟು ರಾಮಕ್ಕ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಗರಿ

0
198

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಹೊಸದಿಲ್ಲಿ: ಪ್ರತಿಷ್ಠಿತ 65ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಶುಕ್ರವಾರ (ಏಪ್ರಿಲ್ 13) ಹೊಸದಿಲ್ಲಿಯ ಶಾಸ್ತ್ರಿ ಭವನದ ಪತ್ರಿಕಾ ಮಾಹಿತಿ ಬ್ಯೂರೋದ (ಪಿಐಬಿ) ಕಾನ್ಫರೆನ್ಸ್ ಕೊಠಡಿಯಲ್ಲಿ ಪ್ರಕಟಿಸಲಾಯಿತು. ಈ ಸಲದ ಪ್ರಶಸ್ತಿ ಆಯ್ಕೆ ಸಮಿತಿಯ ಮುಖ್ಯಸ್ಥರಾಗಿ ಖ್ಯಾತ ನಿರ್ದೇಶಕ ಶೇಖರ್ ಕಪೂರ್ ಕಾರ್ಯನಿರ್ವಹಿಸಿದ್ದಾರೆ.

ಹತ್ತು ಸದಸ್ಯರನ್ನು ಒಳಗೊಂಡಿರುವ ಆಯ್ಕೆ ಸಮಿತಿಯಲ್ಲಿ ಚಿತ್ರಕಥೆಗಾರರಾದ ಇಮ್ತಿಯಾಜ್ ಹುಸ್ಸೇನ್, ಗೀತಸಾಹಿತಿ ಮೆಹಬೂಬ್, ನಟಿ ಗೌತಮಿ ತಡಿಮಲ್ಲ, ಕನ್ನಡದ ನಿರ್ದೇಶಕ ಪಿ ಶೇಷಾದ್ರಿ, ಅನಿರುದ್ಧ್ ರಾಯ್ ಚೌದರಿ, ರಂಜಿತ್ ದಾಸ್, ರಾಜೇಶ್ ಮಪುಸ್ಕರ್, ತ್ರಿಪುರಾರಿ ಶರ್ಮಾ ಮತ್ತು ರುಮಿ ಜಾಫ್ರಿ ಇದ್ದಾರೆ.

ಈ ಸಲದ 2017ರ ಅತ್ಯುತ್ತಮ ನಟ ಪ್ರಶಸ್ತಿಗೆ ‘ರುಸ್ತುಂ’ ಚಿತ್ರದಲ್ಲಿನ ಅಭಿನಯಕ್ಕಾಗಿ ಅಕ್ಷಯ್ ಕುಮಾರ್ ಭಾಜನರಾಗಿದ್ದಾರೆ. ಅತ್ಯುತ್ತಮ ನಟಿಯಾಗಿ ‘ಮಾಮ್’ ಚಿತ್ರದಲ್ಲಿನ ಅಭಿನಯಕ್ಕೆ ದಿವಂಗತ ತಾರೆ ಶ್ರೀದೇವಿ ಭಾಜನರಾಗಿದ್ದಾರೆ.

ಕನ್ನಡದ ಅತ್ಯುತ್ತಮ ಚಿತ್ರವಾಗಿ ‘ಹೆಬ್ಬೆಟ್ಟು ರಾಮಕ್ಕ’ ಆಯ್ಕೆಯಾಗಿದೆ. ಅತ್ಯುತ್ತಮ ಜನಪ್ರಿಯ ಚಿತ್ರ ಪ್ರಶಸ್ತಿ ‘ಬಾಹುಬಲಿ 2’ಗೆ ಒಲಿದಿದೆ. ಅತ್ಯುತ್ತಮ ಹಿನ್ನೆಲೆ ಗಾಯಕರಾಗಿ ಯೇಸುದಾಸ್ ಹಾಗೂ ಗಾಯಕಿಯಾಗಿ ಸಾಷಾ ತೃಪತಿ ಆಯ್ಕೆಯಾಗಿದ್ದಾರೆ.

ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಮೇ 3, 2018ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಪುರಸ್ಕೃತರಿಗೆ ನೀಡಿ ಗೌರವಿಸಲಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)