ಉದಯ್ ಕುಮಾರ್ ಶೆಟ್ಟಿ ಟಿಕೆಡ್ ತಪ್ಪಿದ್ದಕ್ಕೆ ವೀರಪ್ಪ ಮೋಯ್ಲಿ ವಿರುದ್ಧ ಧಿಕ್ಕಾರ ಕೂಗಿದ ಕಾಂಗ್ರೆಸ್ ಕಾರ್ಯಕರ್ತರು

0
188

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಉಡುಪಿ: ಕಾರ್ಕಳದಲ್ಲಿ ಕಾಂಗ್ರೆಸ್ ಭಿನ್ನಮತ ಭುಗಿಲೆದ್ದಿದೆ. ಕಾರ್ಕಳದಿಂದ ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪ್ರಬಲ ಟಿಕೆಟ್ ಆಕಾಂಕ್ಷಿ ಆಗಿದ್ದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಬೆಂಬಲಿಗರು ಸಿಡಿದೆದ್ದಿದ್ದಾರೆ.

ಎಐಸಿಸಿ ಪಟ್ಟಿಯಲ್ಲಿ ಕಾರ್ಕಳದಿಂದ ಗೋಪಾಲ ಭಂಡಾರಿಗೆ ಟಿಕೆಟ್ ಘೋಷಣೆಯಾಗಿದೆ. ಮುನಿಯಾಲು ಉದಯ ಶೆಟ್ಟಿ ಬೆಂಬಲಿಗರು ಮಾಜಿ ಸಿಎಂ ವೀರಪ್ಪ ಮೊಯ್ಲಿ ವಿರುದ್ಧ ಅಸಮಾಧಾನಗೊಂಡಿದ್ದಾರೆ.

ಕಾರ್ಕಳದ ತಾಲೂಕು ಕಚೇರಿಯಲ್ಲಿ ಶೆಟ್ಟಿ ಬೆಂಬಲಿಗರು ಮೊಯ್ಲಿ ವಿರುದ್ಧ ಪ್ರತಿಭಟನೆಗೆ ಕರೆ ನೀಡಿದ್ದಾರೆ.

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸುವಂತೆ ಶೆಟ್ಟಿ ಬೆಂಬಲಿಗರು ಒತ್ತಾಯಿಸಿದ್ದಾರೆ. ಮೊಯ್ಲಿ ಪುತ್ರ ಹರ್ಷ ಮೊಯ್ಲಿ ಕೊನೆ ಕ್ಷಣದಲ್ಲಿ ಟಿಕೆಟ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದರು. ಮೊಯ್ಲಿ ತನ್ನ ಪವರ್ ಬಳಸಿ ಉದಯ ಶೆಟ್ಟಿಗೆ ಟಿಕೆಟ್ ತಪ್ಪಿಸಿ ತಮ್ಮ ಶಿಷ್ಯ ಗೋಪಾಲ ಭಂಡಾರಿಗೆ ಟಿಕೆಟ್ ಕೊಡಿಸಿದ್ದಾರೆ ಎಂಬೂದು ಸದ್ಯದ ಆರೋಪವಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)