ಬೈಂದೂರುನಾದ್ಯಂತ ಬಿಜೆಪಿಯಿಂದ ಭರ್ಜರಿ ಪ್ರಚಾರ

0
255

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

ಬೈಂದೂರು : ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಬಿ.ಜೆ.ಪಿ.ಅಭ್ಯರ್ಥಿ ಬಿ.ಎಂ.ಸುಕುಮಾರ್ ಶೆಟ್ಟಿ ತ್ರಾಸಿ ಮಹಾ ಶಕ್ತಿ ಕೇಂದ್ರ ವ್ಯಾಪ್ತಿಯ ಭಗತ್ ನಗರ್, ಸನ್ಯಾಸಿಬೈಲು ಕಂಚುಗೊಡು ಮುಂತಾದ ಕಡೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಂಡಲ ಅಧ್ಯಕ್ಷ ಸದಾನಂದ ಉಪ್ಪಿನಕುದ್ರು,ಸಾಮಾಜಿಕ ನ್ಯಾಯ ಸಮಿತಿ ಅದ್ಯಕ್ಷ ನಾರಾಯಣ ಕೆ, ಶೇಖರ್ ದೇವಾಡಿಗ, ಗ್ರಾ.ಪ ಅದ್ಯಕ್ಷ ಹರೀಶ್ ಮೆಸ್ತ, ಶಕ್ತಿ ಕೇಂದ್ರದ ಪ್ರಮುಖರು ಹಾಗೂ ಕಾರ್ಯಕರ್ತ ಉಪಸ್ಥಿತಿರಿದ್ದರು.

ಬೈಂದೂರು ವಿಧಾನಸಭಾ ವ್ಯಾಪ್ತಿಯ ಬೈಂದೂರು ಬಿ.ಜೆ.ಪಿ.ಅಭ್ಯರ್ಥಿ ಬಿ.ಎಂ.ಸುಕುಮಾರ್ ಶೆಟ್ಟಿ  ನಾರ್ಕಳಿ ಭಾಗದಲ್ಲಿ ಕಾರ್ಯಕರ್ತರಿಂದ ಮನೆ ಮನೆ ಭೇಟಿ ನೀಡಿ ಮತ ಪ್ರಚಾರ ನಡೆಸಿದರು.

ಬೈಂದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀ ಬಿ.ಎಮ್ ಸುಕುಮಾರ್ ಶೆಟ್ಟಿಯವರ ಚುನಾವಣಾ ಪ್ರಚಾರ ಇಂದು ಶಿರೂರು ಮಹಾಶಕ್ತಿ ಕೇಂದ್ರದ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಗ್ರಾಮಸ್ಥರ ಮೂಲಭೂತ ಸಮಸ್ಯೆಗಳಾದ ಕುಡಿಯುವ ನೀರು, ಮರಳು ಸಮಸ್ಯೆ, ಸಾರ್ವಜನಿಕ ಆಸ್ಪತ್ರೆ ಮುಂತಾದವುಗಳ ಕುರಿತು ಮುಕ್ತವಾಗಿ ಚರ್ಚಿಸಲಾಯಿತು. ಕಾರ್ಯಕರ್ತ ಹಾಗು ಗ್ರಾಮಸ್ಥರು ಗೆಲುವಿಗೆ ಶುಭ ಹಾರೈಸಿದರು. ಬಿಸಿಲ ಬೇಗೆಯಲ್ಲು ಸಹಕಾರ್ಯಕರ್ತರ ಉತ್ಸಾಹ ಹಾಗು ಗ್ರಾಮಸ್ಥರ ಪಾಲ್ಗೊಳ್ಳುವಿಕೆ ಬದಲಾವಣೆಯ ದಿಕ್ಸೂಚಿ ಆಗಿದೆಯೆಂದು ಅಭ್ಯರ್ಥಿ ಬಿ.ಎಮ್ ಸುಕುಮಾರ್ ಶೆಟ್ಟಿಯವರು ನುಡಿದರು.

ಈ ಸಂದರ್ಭದಲ್ಲಿಕ್ಷೇತ್ರದ ಪ್ರಭಾರಿಗಳು,ಪಕ್ಷದ ಮುಖಂಡರು,ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (1) ಅಸಮ್ಮತ (0) ಖಂಡಿಸುವೆ (2) ಅಭಿಪ್ರಾಯವಿಲ್ಲ (0)