ತ್ರಾಸಿ ಸಮುದ್ರ ದಂಡೆಯ ಗೂಡಂಗಡಿಗಳ ತೆರವು, ಖಂಡಿಸಿದ ಅಂಗಡಿ ಮಾಲಕರು

2
3358

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (2) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)

    

ತ್ರಾಸಿ : ಬೆಳ್ಳಂಬೆಳಗ್ಗೆ ಬೈಂದೂರು ತಾಲೂಕಿನ ತ್ರಾಸಿ-ಮರವಂತೆ ಬೀಚ್ ಪಕ್ಕದ ಹೆದ್ದಾರಿ ಬದಿಯ ಅಂಗಡಿಗಳ ತೆರವು ಕಾರ್ಯಚರಣೆ ನಡೆಸಲಾಗಿದೆ.

ಹೆದ್ದಾರಿ ಅಗಲೀಕರಣ ಕಾಮಗಾರಿ ಹಿನ್ನೆಲೆಯಲ್ಲಿ ಹೆದ್ದಾರಿ ಬದಿಯ 28 ಅಂಗಡಿಗಳ ತೆರವಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೋಟಿಸ್ ನೀಡಿದ್ದು, ಕುಂದಾಪುರ ಎಸಿ ಭೂಬಾಲನ್ ನೇತ್ರತ್ವದಲ್ಲಿ ತೆರವು ಕಾರ್ಯಚರಣೆ ನಡೆಸಲಾಗಿತ್ತು.

ಅಂಗಡಿ ತೆರವಿಗೆ ಬೀಚ್ ಬದಿ ವ್ಯಾಪಾರಿಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಸಮುದ್ರಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಒಡ್ಡಿದ್ದಾರೆ. ಅಧಿಕಾರಿಗಳು ಮತ್ತು ಪೊಲೀಸರ ಜೊತೆ ವ್ಯಾಪಾರಿಗಳು ವಾಗ್ವಾದ ನಡೆಸಿದ್ದು, ಸಂಜೆವರೆಗೂ ತೆರವಿಗೆ ಸಮಯಾವಕಾಶ ನೀಡಲಾಗಿದೆ.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (2) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)