ಭೋಜನಕೂಟ ಆಯೋಜಿಸಿದ್ದ ಡಿಕೆಶಿ ವಿರುದ್ಧ ಪ್ರಕರಣ ದಾಖಲು

0
802

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು : ನೀತಿ ಸಂಹಿತೆ ಉಲ್ಲಂಘಿಸಿ ಲ್ಯಾವೆಲ್ಲೆ ರಸ್ತೆಯಲ್ಲಿರುವ ಚಾನ್ಸರಿ ಪೆವಿಲಿಯನ್‌ ಹೊಟೇಲ್‌ನಲ್ಲಿ ಭೋಜನಕೂಟ ಆಯೋಜಿಸಿದ್ದ ಆರೋಪದಲ್ಲಿ ಇಂಧನ ಸಚಿವ ಡಿ.ಕೆ ಶಿವಕುಮಾರ್‌, ರಾಜ್ಯ ಸರಕಾರಿ ನೌಕರರ ಸಂಘದ ಅಧ್ಯಕ್ಷ ಉಪಾಧ್ಯಕ್ಷ ಪುಟ್ಟಸ್ವಾಮಿ ಸೇರಿದಂತೆ ಇನ್ನಿತರರ ವಿರುದ್ಧ ಕಬ್ಬನ್‌ ಪಾರ್ಕ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಾಂತಿನಗರ ವಿಧಾನಸಭೆ ಕ್ಷೇತ್ರದ ಚುನಾವಣಾಧಿಕಾರಿ ಲಾಲ್‌ ಸಿಂಗ್‌ ಲಮಾಣಿ ನೀಡಿದ ದೂರು ಆಧರಿಸಿ ಮೇ 5ರಂದು ಪ್ರಕರಣ ದಾಖಲಾಗಿದೆ. ಕಾಂಗ್ರೆಸ್‌ ಜಿಲ್ಲಾ ಕಾರ್ಯದರ್ಶಿ ಪಟೇಲ್‌ ಪಾಂಡು ಅವರು ಹೊಟೇಲ್‌ನಲ್ಲಿ ಆಯೋಜಿಸಿದ್ದ ಭೋಜನಕೂಟದಲ್ಲಿ ಸಚಿವ ಡಿ.ಕೆ ಶಿವಕುಮಾರ್‌, ಆರೋಗ್ಯ ಇಲಾಖೆಯ ನೌಕರರು ಸೇರಿದಂತೆ ಹಲವು ಸರಕಾರಿ ನೌಕರರು ಭಾಗವಹಿಸಿದ್ದರು. ಹೊಟೇಲ್‌ ಆವರಣದಲ್ಲಿ ನಿಲ್ಲಿಸಿದ್ದ ವಾಹನಗಳನ್ನು ಕೂಡಾ ಚುನಾವಣಾಧಿಕಾರಿಗಳು ಚಿತ್ರಿಸಿಕೊಂಡಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)