ಕರ್ನಾಟಕ ಫಲಿತಾಂಶ ಅತಂತ್ರ : ಸರಕಾರ ರಚನೆಗೆ ರಾಜ್ಯ ರಾಜಕೀಯದಲ್ಲಿ ಹೈ ಡ್ರಾಮ

0
157

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು; ಕರ್ನಾಟಕ ಚುನಾವಣೆ ಫಲಿತಾಂಶ ಬಹುತೇಕ ಪ್ರಕಟವಾಗುತ್ತಿದ್ದಂತೆ ಸರಕಾರ ರಚನೆಯ ಸರ್ಕಸ್‌ ಆರಂಭವಾಗಿದೆ.

ಫಲಿತಾಂಶದಲ್ಲಿ ಬಿಜೆಪಿಗೆ ಬಹುಮತ ಕೊರತೆ ಉಂಟಾಗಿದೆ. ಇದರ ಜತೆಗೆ ಕಾಂಗ್ರೆಸ್‌ ಕೂಡ ಅಧಿಕಾರ ಉಳಿಸಿಕೊಳ್ಳುವ ತವಕದಲ್ಲಿದೆ. ಸಂಖ್ಯಾಬಲ ಇಲ್ಲದಿದ್ದರೂ ಹೇಗಾದರೂ ಮಾಡಿ ಅಧಿಕಾರ ಉಳಿಸಿಕೊಳ್ಳಬೇಕೆಂದು ಕಾಂಗ್ರೆಸ್‌ ನಾಯಕರು ಕೊನೆ ಕ್ಷಣದ ಕಸರತ್ತಿನಲ್ಲಿ ತೊಡಗಿದೆ.

ಬಿಬಿಎಂಪಿ ಮಾದರಿಯಲ್ಲಿಯೇ ಕಾಂಗ್ರೆಸ್‌-ಜೆಡಿಎಸ್‌ ಅಧಿಕಾರ ಚುಕ್ಕಾಣಿ ಹಿಡಿಯಲು ಮುಂದಾಗಿದೆ.

ಫಲಿತಾಂಶದ ಟ್ರೆಂಡ್‌ ಮಧ್ಯಾಹ್ನದ ವೇಳೆಗೆ ದೊರೆಯುತ್ತಿದ್ದಂತೆ ಬಿಜೆಪಿ ಮತ್ತು ಕಾಂಗ್ರೆಸ್‌ ಪಕ್ಷಗಳ ನಾಯಕರು ಸಮಾಲೋಚನೆಯಲ್ಲಿ ತೊಡಗಿದರು.

ಕಾಂಗ್ರೆಸ್‌ ಹೈಕಮಾಂಡ್‌ನಿಂದ ಗುಲಾಮ್‌ ನಬಿ ಆಜಾದ್‌, ಅಶೋಕ್‌ ಗೆಹ್ಲೋಟ್‌, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ರಾಜ್ಯದ ನಾಯಕರ ಜತೆ ನಿರಂತರ ಸಂಪರ್ಕದಲ್ಲಿದ್ದಾರೆ.

ಡಿಕೆ ಶಿವಕುಮಾರ್‌ ಹಾಗೂ ಮಲ್ಲಿಕಾರ್ಜುನ ಖರ್ಗೆ ಈಗಾಗಲೇ ಜೆಡಿಎಸ್‌ ಜತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚೆಗೆ ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಹೈಕಮಾಂಡ್‌ ನಾಯಕರು ಬೆಂಗಳೂರಿಗೆ ಮಂಗಳವಾರ ಆಗಮಿಸಿದ್ದು ರಾಜ್ಯ ನಾಯಕರ ಜತೆ ಚರ್ಚೆ ನಡೆಸಿದ್ದಾರೆ.

ಇನ್ನು ಬಿಜೆಪಿ ಕೂಡ ಈ ವಿಷಯದಲ್ಲಿ ಹಿಂದೆ ಬಿದ್ದಿಲ್ಲ. ಈಗಾಗಲೇ ಗೆಲುವು ಸಾಧಿಸಿರುವ ಪಕ್ಷೇತರ ಅಭ್ಯರ್ಥಿಗಳ ಜತೆ ಚರ್ಚೆಯಲ್ಲಿ ತೊಡಗಿದ್ದಾರೆ.

ಈ ನಡುವೆ ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ.ಎಸ್‌. ಯಡಿಯೂರಪ್ಪ ಮಂಗಳವಾರ ಮಧ್ಯಾಹ್ನ ಹೊಸದಿಲ್ಲಿಗೆ ತೆರಳಿದ್ದಾರೆ.

ಸಂಜೆ ಬಿಜೆಪಿ ಸಂಸದೀಯ ಪಕ್ಷದ ಸಭೆ ಆಯೋಜಿಸಲಾಗಿದೆ. ಮುಂದಿನ ಕಾರ್ಯತಂತ್ರದ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಬಹುಮತ ಕೊರತೆ ಇದ್ದರೂ ಸರಕಾರ ರಚಿಸಲು ಬಿಜೆಪಿ ಹರಸಾಹಸ ಪಡುತ್ತಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)