ಗೋವಾ ಬೀಚ್‌ನಲ್ಲಿ ಬಾಯ್‌‌ಫ್ರೆಂಡ್‌ ಎದುರೇ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ

0
258

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಪಣಜಿ: ಪ್ರಿಯಕರನ ಮುಂದೆಯೇ ಮೂವರು ಕಾಮುಕರು ಸೇರಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದಕ್ಷಿಣ ಗೋವಾದಲ್ಲಿ ನಡೆದಿದೆ.

ಈ ಘಟನೆ ಗುರುವಾರ ರಾತ್ರಿ ಸೆರ್ನಾಬಾಟಿಮ್ ಬೀಚ್ ನಲ್ಲಿ ನಡೆದಿದ್ದು, ಪ್ರೇಮಿಗಳು ಸುತ್ತಾಡಲೆಂದು ಗೋವಾ ಬೀಚ್ ಗೆ ಹೋಗಿದ್ದರು. ಈ ವೇಳೆ ಮೂವರು ಕಾಮುಕರು ಬಂದು ಪ್ರಿಯಕರನಿಗೆ ಥಳಿಸಿ ಯುವತಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಬಗ್ಗೆ ಇಬ್ಬರೂ ಪೊಲೀಸ್ ಠಾಣೆಗೆ ಬಂದು ದೂರು ನೀಡಿದ್ದಾರೆ. ದೂರಿನಲ್ಲಿ ಕಾಮುಕರು ಪ್ರೇಮಿಗಳ ಫೋಟೋ ತೆಗೆದುಕೊಂಡು ಹಣಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಅಂತ ತಿಳಿಸಿದ್ದಾರೆ. ಆದರೆ ಆರೋಪಿಗಳ ಗುರುತು ಇನ್ನು ಪತ್ತೆಯಾಗಿಲ್ಲ.

ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಆರೋಪಿಯನ್ನು ಬಂಧಿಸಲಿಲ್ಲ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ. ಸದ್ಯಕ್ಕೆ ಈ ಪ್ರಕರಣದಲ್ಲಿ ಅನೇಕ ಶಂಕಿತರನ್ನು ಪ್ರಶ್ನಿಸಲಾಗಿದೆ ಎಂದು ಎಸ್‍ಐ ಅರವಿಂದ್ ಗಾವಾಸ್ ತಿಳಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)