ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕನಿಗೆ ಚಪ್ಪಲಿ ಏಟು

0
158

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ದಾವಣಗೆರೆ: ಯುವತಿಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ ಆಟೋ ಚಾಲಕನಿಗೆ ಸ್ಥಳೀಯರು ಥಳಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಮಂಜುನಾಥ್ ಎಂಬಾತಸ್ಥಳೀಯರಿಂದ ಹಲ್ಲೆಗೊಳಗಾದ ಆಟೋ ಚಾಲಕ. ಮಂಜುನಾಥ್ ಯುವತಿಯನ್ನು ನಗರದ ಹೊರವಲಯದ ಬೈಪಾಸ್ ಬಳಿ ಕರೆತಂದಿದ್ದನು. ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸೋದನ್ನು ಕಂಡ ಸ್ಥಳೀಯರು ಮಂಜುನಾಥ್ ನನ್ನು ಪ್ರಶ್ನೆ ಮಾಡಿದ್ದಾರೆ.

ಸ್ಥಳೀಯರ ಪ್ರಶ್ನೆಗಳಿಗೆ ಉತ್ತರಿಸಲು ಮಂಜುನಾಥ್ ತಡವರಿಸಿದ್ದಾನೆ. ಈ ವೇಳೆ ಯುವತಿ ಆಟೋ ಚಾಲಕ ತನಗೆ ಕಿರುಕುಳ ನೀಡುತ್ತಿದ್ದಾನೆಂದು ಸ್ಥಳೀಯರಿಗೆ ತಿಳಿಸಿದ್ದಾಳೆ. ಆಟೋ ಚಾಲಕ ಮಂಜುನಾಥ್ ಗೆ ಯುವತಿ ಹಾಗೂ ಸ್ಥಳೀಯರು ಸೇರಿ ಚಪ್ಪಲಿಯಿಂದ ಧರ್ಮದೇಟು ನೀಡಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)