ಡಿವೈಡರ್​ಗೆ ಡಿಕ್ಕಿಯಾಗಿ ಪಲ್ಟಿ ಹೊಡೆದ ಬಸ್ಸು : 17 ಮಂದಿ ಸಾವು, 35 ಗಾಯ

0
69

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಲಖನೌ: ಚಾಲಕನ ನಿಯಂತ್ರಣ ಕಳೆದುಕೊಂಡ ಖಾಸಗಿ ಬಸ್​ ರಸ್ತೆ ವಿಭಜಕಕ್ಕೆ ಡಿಕ್ಕಿಯಾಗಿ ಉರುಳಿ ಬಿದ್ದ ಪರಿಣಾಮ ಸುಮಾರು 17 ಪ್ರಯಾಣಿಕರು ಸಾವಿಗೀಡಾಗಿ, 35 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಬುಧವಾರ ಬೆಳಗ್ಗೆ ಉತ್ತರ ಪ್ರದೇಶದ ಮೈನ್ಪುರಿ ಜಿಲ್ಲೆಯಲ್ಲಿ ನಡೆದಿದೆ.

ಬಸ್​ ವೇಗದಿಂದ ಚಲಿಸುತ್ತಿದ್ದ ಕಾರಣ ಈ ಘಟನೆ ಸಂಭವಿಸಿದೆ ಎಂದು ಪ್ರಾಥಮಿಕ ತನಿಖಾ ವರದಿಯಲ್ಲಿ ಉಲ್ಲೇಖವಾಗಿದೆ. ಈ ಘಟನೆ ಮೈನ್ಪುರಿ ಜಿಲ್ಲೆಯ ದನ್ಹರಾ ಪ್ರದೇಶದಲ್ಲಿ ನಡೆದಿದೆ.

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಲಾಗಿದ್ದು, ಅದರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. ಬಸ್​ ಚಾಲಕನಿಗೂ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸ್​ ಆತನ ಹೇಳಿಕೆ ಪಡೆಯಲು ಕಾಯುತ್ತಿದ್ದಾರೆ.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಮೃತರ ಕುಟುಂಬಕ್ಕೆ ಸಾಂತ್ವನ ತಿಳಿಸಿದ್ದು, ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಲು ನೆರವಾಗುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಅಪಘಾತ ಸಂಭವಿಸಿದರ ಬಗ್ಗೆ ಪೊಲೀಸರಿಂದ ತನಿಖೆ ಮುಂದುವರಿದಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

dinetmedia