ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ- ಒಂದೇ ಕುಟುಂಬದ ಆರು ಮಂದಿ ದುರ್ಮರಣ

0
99

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಯಮುನಾನಗರ: ತೈಲ ಟ್ಯಾಂಕರ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಸಾವಿನ ಮನೆಯಿಂದ ಬರುತ್ತಿದ್ದ ಒಂದೇ ಕುಟುಂಬದ ಆರು ಮಂದಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ.

ರಸಲ್ಪುರ್ ನಿವಾಸಿಯಾದ ಸುರೇಂದ್ರ ಎಂಬುವರು ತಮ್ಮ ಕುಟುಂಬದೊಂದಿಗೆ ಯಮುನಾನಗರಕ್ಕೆ ಅಂತ್ಯಕ್ರಿಯೆಗೆ ತೆರಳಿದ್ದು, ಅಂತ್ಯಕ್ರಿಯೆ ಮುಗಿಸಿ ವಾಪಸ್ ಮರಳುವಾಗ ವೇಗವಾಗಿ ಬಂದ ಟ್ಯಾಂಕರ್ ಕಾರಿಗೆ ಅಪ್ಪಳಿಸಿ ಈ ಭೀಕರ ಅಪಘಾತ ಜರುಗಿದೆ ಎಂದು ತಿಳಿದು ಬಂದಿದೆ.

ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯವಾಗಿದ್ದು ಗಾಯಾಳುಗಳನ್ನು ಬಿಸ್ಲಪುರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ತೈಲ ಟ್ಯಾಂಕರ್ ಚಾಲಕ ಘಟನೆಯ ನಂತರ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಅಪಘಾತದಿಂದ ಕಾರು ನುಜ್ಜು-ಗುಜ್ಜಾಗಿದ್ದು ಶವಗಳನ್ನು ಹೊರತೆಗೆಯಲು ಕಾರಿನ ಹೊರಭಾಗವನ್ನು ಸಂಪೂರ್ಣ ಕತ್ತರಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)