ಮಧ್ಯಪ್ರದೇಶದಲ್ಲಿ 8ರ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ : ಬೈಂದೂರಿನ ಕಾಲೇಜು ವಿದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ

0
41

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (5) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಬೈಂದೂರು: ಮಧ್ಯ ಪ್ರದೇಶದಲ್ಲಿ ನಡೆದಿದ್ದ 8 ವರ್ಷದ ಬಾಲಕಿ ದಿವ್ಯ ಮೇಲಿನ ಅತ್ಯಾಚಾರ ಪ್ರಕರಣವನ್ನು ಖಂಡಿಸಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ಬೈಂದೂರು ಜೂನಿಯರ್ ಕಾಲೇಜು ದ್ಯಾರ್ಥಿಗಳಿಂದ ಬೃಹತ್ ಪ್ರತಿಭಟನೆ ನಡೆಸಿದ್ದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರಿನಿಂದ ಮೆರವಣಿಗೆ ಮೂಲಕ ಸಾಗಿದ ವಿದ್ಯಾರ್ಥಿಗಳು, ಬೈಂದೂರು ತಹಶಿಲ್ದಾರರ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳು ಆರೋಪಿಗಳಿಗೆ ಕಠಿಣ ಶಿಕ್ಷೆ ಮತ್ತು ಸಂತ್ರಸ್ತ ಬಾಲಕಿ ದಿವ್ಯ ಕುಟುಂಬಕ್ಕೆ ನ್ಯಾಯ ಒದಗಿಸುವಂತೆ ಆಗ್ರಹಿಸಿದರು, ಸರಕಾರದ ವಿರುದ್ದ ಆಕ್ರೋಶ ವ್ಯಕ್ತ ಪಡಿಸಿದರು ಬಳಿಕ ಪ್ರಕರಣದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಶ್ರೀಮತಿ ಗಿರಿಜಾ ಪ್ರಭಾರ ಉಪ ತಹಶಿಲ್ದಾರರರಿಗೆ ಮನವಿ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಸರಕಾರಿ ಪ್ರಥಮ ದರ್ಜೆ ಕಾಲೇಜು ಬೈಂದೂರು ಹಾಗೂ ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾಥಿಗಳು ಭಾಗವಹಿಸಿದ್ರು.

dinetmedia