ಚಿಕ್ಕಮಗಳೂರಿನಲ್ಲಿ ಮಳೆಯ ಆರ್ಭಟ : ಗೋಡೆ ಕುಸಿದು ಮಹಿಳೆ ಮೃತ

0
139

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು. ಕಂಬಿಹಳ್ಳಿ ಗ್ರಾಮದಲ್ಲಿ ಕೊಟ್ಟಿಗೆ ಗೋಡೆ ಕುಸಿದು ಮಹಿಳೆ ಮೃತಪಟ್ಟ ಘಟನೆ ನಡೆದಿದೆ. ವನಜಾ (40) ಮೃತ ದುರ್ದೈವಿ.

ಕೊಪ್ಪದಲ್ಲಿ ಮನೆ ಕುಸಿತ… : ಕಳೆದ ರಾತ್ರಿ ಕೊಪ್ಪ ತಾಲೂಕಿನ ಹರಿಹರಪುರದ ದೇವರಮನೆ ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಮನೆ ಕುಸಿದಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ರಘು ಎಂಬುವರಿಗೆ ಸೇರಿದ ಮನೆ ಇದಾಗಿದೆ ಎಂದು ತಿಳಿದುಬಂದಿದೆ.

ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾ, ಭದ್ರಾ ಹಾಗೂ ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)