ಡಿ.ಕೆ.ಶಿವಕುಮಾರ್ ಭೋಜನ ಕೂಟದಲ್ಲಿ ಬಿಜೆಪಿ ಶಾಸಕ ಗೂಳಿಹಟ್ಟಿ

0
151

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

 

 

ಬೆಂಗಳೂರು; ರಾಜ್ಯ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಂಗಳವಾರ ಸಮ್ಮಿಶ್ರ ಸರ್ಕಾರದ ನೂತನ ಸಚಿವರು ಹಾಗೂ ಕಾಂಗ್ರೆಸ್ ಶಾಸಕರಿಗೆ ಮಂಗಳವಾರ ಔತಣಕೂಟವನ್ನು ಆಯೋಜಿಸಿದ್ದು, ಈ ಔತಣಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕಾಣಿಸಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಖಾಸಗಿ ಹೋಟೆಲ್ ನಲ್ಲಿ ನಡೆದ ಈ ಭೋಜನ ಕೂಟಕ್ಕೆ ರಾತ್ರಿ 8ಕ್ಕೆ ಆಗಮಿಸಿದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾತ್ರಿ 11 ಗಂಟೆವರೆಗೂ ಇದ್ದರು, ಔತಣಕೂಟದಲ್ಲಿ ಪಾಲ್ಗೊಂಡಿದ್ದವರೊಂದಿಗೆ ಬೆರೆತು 3 ಗಂಟೆ ಕಾಲ ಕಾಳೆದರು.

‘ಕುತೂಹಲಕಾರಿ ಸಂಗತಿಯೆಂದರೆ, ಹೆಚ್.ಡಿ.ರೇವಣ್ಣ ಸಹ ಔತಣಕೂಟದಲ್ಲಿ ಬಹಳ ಉತ್ಸಾಹದಿಂದ ಪಾಲ್ಗೊಂಡಿದ್ದರು. ಇದಕ್ಕೂ ಮೀರಿದ ಅಚ್ಚರಿ ಎಂದರೆ, ಕಾಂಗ್ರೆಸ್ ಹಾಗೂ ಜೆಡಿಎಸ್ ಶಾಸಕರಿಗೆ ಆಯೋಜಿಸಿದ್ದ ಈ ಔತಣ ಕೂಟದಲ್ಲಿ ಬಿಜೆಪಿಯ ಗೂಳಿಹಟ್ಟಿ ಶೇಖರ್ ಅವರು ಕೂಡ ಕಾಣಿಸಿಕೊಕಂಡಿದ್ದು.

ಡಿ.ಕೆ.ಶಿವಕುಮಾರ್ ಅವರ ಆಹ್ವಾನದ ಮೇರೆಗೆ ಗೂಳಿಹಟ್ಟಿ ಶೇಖರ್ ಅವರು ಆಗಮಿಸಿದ್ದರು ಎಂದು ಹೇಳಲಾಗುತ್ತಿದೆ.

ಸಮ್ಮಿಶ್ರ ಸರ್ಕಾರ ಮಿತ್ರಪಕ್ಷಗಳ ಕೂಟದಲ್ಲಿ ಪ್ರತಿಪಕ್ಷ ಬಿಜೆಪಿಯ ಏಕೈಕ ಶಾಸಕ ಪಾಲ್ಗೊಂಡಿರುವುದು ಇದೀಗ ಹಲವರ ಹುಬ್ಬೇರುವಂತೆ ಮಾಡಿದೆ.

 

ಹೆಚ್ಚಿನ ಓದುಗರು ಈ ಸುದ್ದಿಯನ್ನು ಸಮ್ಮತ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (1) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)