ಆರೋಗ್ಯವಂತ ಮಗುವಿಗಾಗಿ ಆರು ವರ್ಷದ ಮಗಳನ್ನು ಕೊಂದ ದಂಪತಿ

0
182

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಲಕ್ನೋ: ಅಪೌಷ್ಠಿಕತೆಯಿಂದ ಬಳಲುತ್ತಿರುವ ಪುತ್ರಿಯನ್ನು ಕೊಂದರೆ ಮುಂದೆ ಹುಟ್ಟುವ ಮಗು ಆರೋಗ್ಯವಂತವಾಗಿರುತ್ತದೆ ಎಂದು ಮಂತ್ರವಾದಿಯೊಬ್ಬ ಹೇಳಿದ ಮಾತಿನಂದೆ ದಂಪತಿ ತಮ್ಮ ಮಗಳನ್ನು ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಮೊರಾದಾಬಾದ್‌ನಲ್ಲಿ ನಡೆದಿದೆ.

ಮೊರಾದಾಬಾದ್‌ನಲ್ಲಿ ಜಿಲ್ಲೆಯ ಚೌಧರ್‌ಪುರ ಗ್ರಾಮದ ನಿವಾಸಿಯಾಗಿರುವ ಈ ದಂಪತಿ ಪುತ್ರಿ ಆರು ವರ್ಷದ ತಾರಾ ಬಾಲಗ್ರಹ( ಮೆದು ಮೂಳೆ ರೋಗ)ದಿಂದ ಬಳಲುತ್ತಿದ್ದು ನಿತ್ರಾಣವಾಗಿದ್ದಳು. ಇದರಿಂದ ಆತಂಕಗೊಂಡ ದಂಪತಿ ಮಂತ್ರವಾದಿಯೊಬ್ಬನ ಬಳಿ ಹೋಗಿದ್ದಾರೆ. ಆಕೆಯನ್ನು ಕೊಂದರೆ ಮಂದೆ ಹುಟ್ಟುವ ಮಗು ಆರೋಗ್ಯವಾಗಿರುತ್ತದೆ ಎಂದು ಸಲಹೆ ನೀಡಿದ್ದಾನೆ.

ಇದರಂತೆ ಮಗುವನ್ನು ಕೊಂದು ಬಳಿಕ ಮನೆಯಲ್ಲಿ ಹೂತಿಡಲಾಗಿದೆ. ಈ ಬಗ್ಗೆ ನೆರೆಮನೆಯವರು ನೀಡಿದ ಮಾಹಿತಿಯಂತೆ ಪೊಲೀಸರು ಸ್ಥಳಕ್ಕೆ ತೆರಳಿ ಮನೆಯೊಳಗೆ ಅಗೆದು ನೋಡಿದಾಗ ಮಗುವಿನ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಗುವನ್ನು ಐದು ದಿನ ನೀರು ಕೊಡದೆ ಉಪವಾಸ ಕೆಡವಿ ಕಾರಣ ಉಸಿರುಗಟ್ಟಿ ಮಗು ಮೃತಪಟ್ಟಿದೆ ಎಂದು ಮರಣೋತ್ತರ ಪರೀಕ್ಷೆಯ ವರದಿ ತಿಳಿಸಿದೆ.

ದಂಪತಿ ಪರಾರಿಯಾಗಿದ್ದು ಮನೆಯಲ್ಲಿದ್ದ ಅಜ್ಜಿ ಘಟನೆಯ ಬಗ್ಗೆ ಪೊಲೀಸರಿಗೆ ವಿವರಿಸಿದ್ದಾಳೆ. ದಂಪತಿ ವಿದುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)