ಒಳ ಉಡುಪಿನಲ್ಲಿ ಅಕ್ರಮ ಚಿನ್ನ ಸಾಗಾಟ ಮಹಿಳೆಯರು ಅಂದರ್

0
118

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಕೋಟೆ ಕಣ್ಣು ತಪ್ಪಿಸಿ ಚಿನ್ನ ಸಾಗಾಣಿಕೆಗೆ ಯತ್ನಿಸಿದ್ದ  ಮೂವರು ಆರೋಪಿಗಳನ್ನು ಕಸ್ಟಮ್ಸ್ ಅಧಿಕಾರಿಗಳು ಸೆರೆ ಹಿಡಿದಿದ್ದು, ಅವರಿಂದ 2  ಕೆ.ಜಿ. ಚಿನ್ನ ವಶಪಡಿಸಿ ಕೊಂಡಿದ್ದಾರೆ. ದುಬೈಯಿಂದ ಸೋಮವಾರ ಆಗಮಿಸಿದ ಶಹೀದಾ ಬಾನು ಎಂಬಾಕೆಯನ್ನು ಕಸ್ಟಮ್ ಅಧಿಕಾರಿಗಳು, ವಿಮಾನ ನಿಲ್ದಾಣದಿಂದ ಹೊರ ಹೋಗುವಾಗ ಅನುಮಾನದ ಮೇರೆಗೆ ತಪಾ ಸಣೆ ನಡೆಸಿದ್ದರು.

ಆಗ ಆಕೆಯ ಒಳ ಉಡುಪಿನಲ್ಲಿ ಅಡಗಿಸಿಟ್ಟು ಕೊಂಡಿದ್ದ 796  ಗ್ರಾಂ ಚಿನ್ನದ ಪುಡಿ ಪತ್ತೆಯಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಮತ್ತಿಬ್ಬರು ದುಬೈನಿಂದ ಆಗಮಿಸಿದ ತಮಿಳುನಾಡು ಮೂಲದ ಪ್ರಯಾಣಿಕರು, ವಿಮಾನ ನಿಲ್ದಾಣದ ನಿರ್ಗಮನ ದ್ವಾರದ ಲೋಹ ಪರಿಶೋಧಕ ವೇಳೆ ಸಿಕ್ಕಿಬಿದ್ದಿದ್ದಾರೆ. ಆರೋಪಿಗಳಿಂದ 1,200 ಗ್ರಾಂ ಚಿನ್ನಾಭರಣ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)