ಚಾಲಕನ ನಿಯಂತ್ರಣ ತಪ್ಪಿ ಜೀಪ್ ಪಲ್ಟಿ : ಒರ್ವ ಸಾವು , ಇಬ್ಬರು ಗಂಬೀರ ಗಾಯ

0
159

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ರಾಯಚೂರು: ಜೀಪ್ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ಮುದಗಲ್ ಬಳಿ ನಡೆದಿದೆ.

22 ವರ್ಷದ ಲಿಂಗನಗೌಡ ಮೃತ ದುರ್ದೈವಿ. ಕುಷ್ಟಗಿ ಶಾಸಕ ಅಮರೇಗೌಡ ಬಯ್ಯಾಪುರ ಸಹೋದರ ಆರ್‍ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿರುವ ಶರಣಗೌಡ ಬಯ್ಯಾಪುರ ಅವರ ಪುತ್ರನೇ ಮೃತ ಲಿಂಗನಗೌಡ. ಚಾಲಕನ ನಿಯಂತ್ರಣ ತಪ್ಪಿ ಲಿಂಗಸುಗೂರು ಮುದಗಲ್ ರಸ್ತೆಯಲ್ಲಿ ಜೀಪು ಪಲ್ಟಿಯಾಗಿದೆ.

ಸದ್ಯ ಗಂಭೀರವಾಗಿ ಗಾಯಗೊಂಡಿರುವ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಮುದಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)