ಕಲಬುರಗಿ: ಹಾರಿಯಿಂದ ಪತ್ನಿಯ ಹೊಟ್ಟೆಗೆ ಇರಿದು ಕೊಲೆಗೈದು ಪತಿ

0
143

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಕಲಬುರಗಿ: ಕಬ್ಬಿಣದ ಹಾರಿಯಿಂದ ಪತ್ನಿಯ ಹೊಟ್ಟೆಗೆ ಇರಿದು ಪತಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ.

ತಾಲೂಕಿನ ಹೀರಾಪುರದಲ್ಲಿ ಘಟನೆ ನಡೆದಿದ್ದು, ಪತ್ನಿ ಸವಿತಾ(35) ಎಂಬವರನ್ನು ಕೊಲೆಗೈದು ಪತಿ ಸಂತೋಷ್ ಪರಾರಿಯಾಗಿದ್ದಾನೆ.

ಪತಿ- ಪತ್ನಿ ಮಧ್ಯೆ ಮನೆಯಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ ಎನ್ನಲಾಗಿದ್ದು, ಕೊಲೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ.

ಸ್ಥಳಕ್ಕೆ ಕಲಬುರಗಿ ಗ್ರಾಮೀಣ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)