ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲು

0
165

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು: ಸ್ಯಾಂಡಲ್ ವುಡ್ ನಟ ರಕ್ಷಿತ್ ಶೆಟ್ಟಿಯ ವಿರುದ್ಧ ಜನರು ಟ್ವಿಟ್ಟರ್ ಮೂಲಕ ಟ್ರಾಫಿಕ್ ಪೊಲೀಸರಿಗೆ ದೂರು ನೀಡಿದ್ದಾರೆ.

ನೋ ಪಾರ್ಕಿಂಗ್ ಝೋನ್ ನಲ್ಲಿ ಪದೇ ಪದೇ ಆಡಿ ಕಾರನ್ನು ಪಾರ್ಕ್ ಮಾಡಲಾಗುತ್ತದೆ ಎಂದು ಆರೋಪಿಸಿ ಜೆಪಿ ನಗರದ ನಿವಾಸಿಯಾಗಿರುವ ಧನಂಜಯ್ ಪದ್ಮನಾಭಾಚಾರ್ ಈ ಬಗ್ಗೆ ಸಂಚಾರ ಪೊಲೀಸರಿಗೆ ದೂರು ನೀಡಿದ್ದಾರೆ.

ಈ ಬಗ್ಗೆ ಕಾರಿನ ಚಾಲಕನಿಗೆ ಅನೇಕ ಬಾರಿ ಭದ್ರತಾ ಸಿಬ್ಬಂದಿ ಹೇಳಿದ್ದಾರೆ. ಆದರು ಆತ ತಲೆ ಕೆಡಿಸಿಕೊಂಡಿಲ್ಲ. ಮತ್ತೆ ಆ ಜಾಗದಲ್ಲಿ ಕಾರ್ ಪಾರ್ಕಿಂಗ್ ಮಾಡಿದ್ದ.ಕೊನೆಗೆ ಅಲ್ಲಿನ ನಿವಾಸಿಗಳು ಕಾರು ಯಾರದು ಎಂದು ತಿಳಿದುಕೊಳ್ಳಲು ಅವರೇ ಕಾರ್ ನಂಬರ್ ಬರೆದುಕೊಂಡು ಆರ್ ಟಿಓಗೆ ಹೋಗಿ ರೆಕಾರ್ಡ್ ನಲ್ಲಿ ಚೆಕ್ ಮಾಡಿಸಿದ್ದಾರೆ. ಅಲ್ಲಿ ರಕ್ಷಿತ್ ಶೆಟ್ಟಿ ಅವರದ್ದು ಎಂದು ತಿಳಿದು ಬಂದಿದೆ. ಬಳಿಕ ಸಂಚಾರದ ನೀತಿ, ನಿಯಮಗಳು ಕೇವಲ ಸಾಮಾನ್ಯ ಜನರಿಗೆ ಮಾತ್ರ ಇರುವುದೇ, ಸ್ಯಾಂಡಲ್ ವುಡ್ ಹೀರೋಗಳಿಗೆ ಬೇರೆ ನಿಯಮವಿದೆಯೇ ಎಂದು ಧನಂಜಯ್ ಅವರು ಟ್ವಿಟ್ಟರ್ ನಲ್ಲಿ ಪ್ರಶ್ನೆ ಮಾಡಿದ್ದಾರೆ.

ಕೂಡಲೇ ಜನ ರಕ್ಷಿತ್ ಶೆಟ್ಟಿ ವಿರುದ್ಧ ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಟ್ವಿಟ್ಟರ್ ಮೂಲಕ ದೂರು ನೀಡಿದ್ದಾರೆ. ಜವಾಬ್ಧಾರಿ ಯುತ ನಟರೇ ಈ ರೀತಿ ನಡೆದುಕೊಂಡರೆ ಹೇಗೆ ಅಂತಾ ಜನ ಸಾಮಾಜಿಕ ಜಾಲತಾಣದಲ್ಲಿ ನಟನನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೀವು ರಿಯಲ್ ಲೈಫ್ ನಲ್ಲಿ ಹೀರೋ ಆಗಬೇಕು ರೀಲ್ ಲೈಫ್ ನಲ್ಲಿ ಮಾತ್ರ ಅಲ್ಲ ಎಂದು ಹೇಳಿದ್ದು, ನಟನಿಗೂ ಕಾರ್ ಫೋಟೋ ಪೋಸ್ಟ್ ಮಾಡಿ ಟ್ವೀಟ್ ಮಾಡಿದ್ದಾರೆ.

ಸದ್ಯಕ್ಕೆ ರಕ್ಷಿತ್ ಶೆಟ್ಟಿ ಈ ಕಾರನ್ನು ತಮ್ಮ ಗೆಳೆಯನಿಗೆ ಮಾರಾಟ ಮಾಡಿದ್ದಾರೆ ಅನ್ನೋ ಸುದ್ದಿ ಇದೆ. ಆದರೆ ಆರ್ ಟಿಓ ರೆಕಾರ್ಡ್ ನಲ್ಲಿ ಮಾತ್ರ ನಟ ರಕ್ಷಿತ್ ಶೆಟ್ಟಿ ಹೆಸರು ಇದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)