ಬೆಂಗಳೂರು : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

0
190

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೆಂಗಳೂರು: ಬುಧವಾರ ರಾತ್ರಿ ನಗರದ ಮರಿಯಪ್ಪನಪಾಳ್ಯದಲ್ಲಿ ಯುವಕನೊಬ್ಬನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆಗೈಯಲಾಗಿದೆ.

28 ವರ್ಷದ ಪ್ರತಾಪ್ ಹತ್ಯೆಯಾಗಿರುವ ಯುವಕ. ಈತ ಜೆ.ಪಿ.ನಗರದ ನಿವಾಸಿಯಾಗಿದ್ದು, ಬುಧವಾರ ಸಂಜೆ ತನ್ನ ಸ್ನೇಹಿತ ಅರುಣ್ ಅವರ ಮಗನ ಹುಟ್ಟುಹಬ್ಬಕ್ಕೆ ತೆರಳಿದ್ದನು. ಮರಿಯಪ್ಪನಪಾಳ್ಯದ 3 ನೇ ಕ್ರಾಸ್ ನಲ್ಲಿರುವ ಅರುಣ್ ಮನೆಯಲ್ಲಿ ಹುಟ್ಟುಹಬ್ಬ ಆಚರಣೆ ನಡೆಯುತ್ತಿತ್ತು.

ಹುಟ್ಟುಹಬ್ಬ ಆಚರಣೆ ಬಳಿಕ ಪ್ರತಾಪ್ ಮನೆಯಿಂದ ಹೊರಗಡೆ ಹೋಗಿದ್ದಾನೆ. ಈ ವೇಳೆ ದುಷ್ಕರ್ಮಿಗಳು ಪ್ರತಾಪ್ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ನಡುರಸ್ತೆಯಲ್ಲಿ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಬಳಿಕ ಜ್ಞಾನಭಾರತಿ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.

ಮೃತ ಪ್ರತಾಪ್ ಅಪರಾಧ ಹಿನ್ನೆಲೆ ಉಳ್ಳವನಾ? ಎಂಬುದರ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಸದ್ಯಕ್ಕೆ ಆತನನ್ನು ಕೊಲೆ ಮಾಡಿರುವುದಕ್ಕೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಆತನ ಸ್ನೇಹಿತ ಅರುಣ್ ನನ್ನು ವಿಚಾರಣೆಗೊಳಪಡಿಸಿದ್ದು, ತನಿಖೆ ಚುರುಕುಗೊಳಿಸಲಾಗಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)