ಪ್ಲಾಸ್ಟಿಕ್ ಫ್ಯಾಕ್ಟರಿ ಬೆಂಕಿಗಾಹುತಿ-ಕೋಟ್ಯಂತರ ರೂ ಮೌಲ್ಯದ ವಸ್ತುಗಳು ಭಸ್ಮ

0
226

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಹಾಸನ: ಪ್ಲಾಸ್ಟಿಕ್ ಫ್ಯಾಕ್ಟರಿಯಲ್ಲಿ ಬೆಂಕಿ ಹೊತ್ತಿಕೊಂಡು ಕೋಟ್ಯಂತರ ಮೌಲ್ಯದ ವಸ್ತುಗಳು ನಷ್ಟವಾಗಿರುವ ಘಟನೆ ಹಾಸನದ ಕೈಗಾರಿಕಾ ಬಡಾವಣೆಯಲ್ಲಿ ಸಂಭವಿಸಿದೆ.

ಈ ಪ್ಲಾಸ್ಟಿಕ್ ಫ್ಯಾಕ್ಟರಿ ಹಾಸನ ನಿವಾಸಿ ಪೈರೋಜ್ ಎಂಬವರಿಗೆ ಸೇರಿದೆ. ತಡರಾತ್ರಿ 1 ಗಂಟೆಗೆ ಈ ಅವಘಡ ಸಂಭವಿಸಿದೆ. ಪ್ಲಾಸ್ಟಿಕ್ ಉತ್ಪನ್ನಗಳ ಖಾಸಗಿ ಘಟಕವಾಗಿದ್ದು, ಕಚ್ಚಾ ವಸ್ತುಗಳಾದ ಪೇಪರ್ ಮತ್ತು ಪ್ಲಾಸ್ಟಿಕ್ ವಸ್ತುಗಳು ಭಸ್ಮವಾಗಿವೆ. ಕಾರ್ಖಾನೆ ಒಳಗೆ ನಿಂತಿದ್ದ ಲಾರಿಯಿಂದ ಶಾರ್ಟ್ ರ್ಸಕ್ಯೂಟ್ ಆಗಿ ಈ ಅವಘಡ ಸಂಭವಿಸಿದೆ ಎಂದು ಹೇಳಲಾಗಿದೆ.

ಕಾರ್ಖಾನೆ ಸಂಪೂರ್ಣ ಬೆಂಕಿಗಾಹುತಿಯಾಗಿದ್ದು, ಸ್ಥಳಕ್ಕೆ 5 ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ತಡರಾತ್ರಿ 1 ಗಂಟೆಯಿಂದ ಮುಂಜಾನೆವರೆಗೂ ಕಾರ್ಯಾಚರಣೆ ನಡೆಸಿದ್ದಾರೆ. ಹಾಸನ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)