ಮನೆಯವರ ಕಣ್ಣ ಮುಂದೆ ಇಬ್ಬರು ದುಷ್ಕರ್ಮಿಗಳಿಂದ ಮಹಿಳೆಯ ಮೇಲೆ ಅತ್ಯಾಚಾರ

0
212

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಘಾಜಿಯಾಬಾದ್‌: ಕುಟುಂಬ ಸದಸ್ಯರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡು ಮಹಿಳೆ ಮೇಲೆ ಇಬ್ಬರು ವ್ಯಕ್ತಿಗಳು ಅತ್ಯಾಚಾರ ಎಸಗಿ, ಮನೆ ಲೂಟಿ ಮಾಡಿದ್ದಾರೆ.

ಘಾಜಿಯಾಬಾದ್‌ನ ಕಾಕ್ರಾ ಎಂಬ ಗ್ರಾಮದಲ್ಲಿ ಬುಧವಾರ ರಾತ್ರಿ ಘಟನೆ ನಡೆದಿದೆ. ಐವರು ದುಷ್ಕರ್ಮಿಗಳ ತಂಡ ಮನೆಗೆ ನುಗ್ಗಿ ಕುಟುಂಬಸ್ಥರನ್ನು ಒತ್ತೆಯಾಳುಗಳನ್ನಾಗಿ ಮಾಡಿಕೊಂಡಿದೆ. ನಂತರ ಮಹಿಳೆ ಮೇಲೆ ಇಬ್ಬರು ಅತ್ಯಾಚಾರ ಎಸಗಿದ್ದಲ್ಲದೆ ಮನೆಯನ್ನು ಲೂಟಿ ಮಾಡಿದ್ದಾರೆ ಎಂದು ಡಿವೈಎಸ್​ಪಿ ಪ್ರಭಾತ್‌ ಕುಮಾರ್‌ ತಿಳಿಸಿದ್ದಾರೆ.

ಘಟನೆ ಸಂಬಂಧ ಎಫ್‌ಐರ್‌ ದಾಖಲಿಸಿಕೊಂಡಿರುವ ಪೊಲೀಸರು ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)