ತೈಲ ಬೆಲೆ ಏರಿಕೆ ಖಂಡಿಸಿ ಬೈಂದೂರು ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

0
277

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (1) ಅಸಮ್ಮತ (1) ಖಂಡಿಸುವೆ (2) ಅಭಿಪ್ರಾಯವಿಲ್ಲ (0)

      

ಬೈಂದೂರು : 2014ರ ಚುನಾವಣೆ ಪ್ರಚಾರದಲ್ಲಿ ಮೋದಿ ನೇತೃತ್ವದ ಬಿಜೆಪಿ ಜಪಿಸಿದ್ದು ಅಚ್ಚೇ ದಿನ್ ಮಂತ್ರ. ಆದ್ರೆ ಅಧಿಕಾರಕ್ಕೆ ಬಂದ ನಂತ್ರ ಪ್ರಧಾನಿ ಮೊದಿ ಅದನ್ನು ಮರೆತೆ ಬಿಟ್ಟಂತೆ ಕಾಣುತ್ತಿದೆ. ಯುಪಿಎ ಅವಧಿಗಿಂತ ದೇಶದಲ್ಲಿ ದಿನಗಳು ದುಬಾರಿಯಾಗುತ್ತಿದೆ. ಅದ್ರಲ್ಲೂ ಪೆಟ್ರೋಲ್, ಡೀಸೆಲ್ ಬೆಲೆಯಂತೂ ಯಾರ ಹಿಡಿತಕ್ಕೂ ಸಿಗದ ರೀತಿಯಲ್ಲಿ ಗಗನಮುಖಿಯಾಗಿದೆ.

ಇದೀಗ ಮತ್ತೆ ಲೋಕಸಭೆ ಚುನಾವಣೆ ಬರುತ್ತಿದೆ. ಅದಕ್ಕೆ ಸಿದ್ಧವಾಗುತ್ತಿರೋ ವಿಪಕ್ಷ ಕಾಂಗ್ರೆಸ್ ಇದೀಗ ತೈಲ ಬೆಲೆ ಅಸ್ತ್ರವನ್ನು ಪ್ರಯೋಗಿಸಿದೆ. ಸೋಮವಾರ ಭಾರತ್ ಬಂದ್‍ಗೆ ಕರೆ ನೀಡಿದ್ದು ಬೈಂದೂರಿನಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪೆಟ್ರೋಲ್, ಡೀಸೆಲ್, ಗ್ಯಾಸ್, ಬೆಲೆ ಏರಿಕೆಯ ವಿರುದ್ದ ಕೇಂದ್ರದ ಸರಕಾರದ ಜನ ವಿರೋಧಿ ನೀತಿಯ ವಿರೋಧಿಸಿ ಬೈಂದೂರು ಸರ್ಕಲ್ ನಲ್ಲಿ ಒಂದು ಗಂಟೆ ವಾಹನ ಸಂಚಾರ ಸ್ಥಗಿತಗೊಳಿಸಿ ಪ್ರತಿಭಟನೆ ನೆಡೆಸಲಾಯಿತು.

ಬೈಂದೂರಿನಲ್ಲಿ 10ರಿಂದ 10.30 ವರೆಯವರೆಗೆ ಎಲ್ಲಾ ಅಂಗಡಿ ಮುಗಟ್ಟು ಬಂದ್ ಮಾಡಿ ಬೆಂಬಲ ಸೂಚಿಸಿದರು.

ಈ ಸಂದರ್ಭದಲ್ಲಿ ಬೈಂದೂರಿನ ಮಾಜಿ ಶಾಸಕ ಗೋಪಾಲ ಪೂಜಾರಿ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಜಿ.ಪಂ ಸದಸ್ಯ ಗೌರಿ ದೇವಾಡಿಗ, ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್.ರಾಜು ಪೂಜಾರಿ ಹಾಗೂ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಶಭಾಷ್ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (4) ಸಮ್ಮತ (1) ಅಸಮ್ಮತ (1) ಖಂಡಿಸುವೆ (2) ಅಭಿಪ್ರಾಯವಿಲ್ಲ (0)