ಹೋಂ ವರ್ಕ್ ಮಾಡದೇ ಇರುವ ವಿದ್ಯಾರ್ಥಿಗೆ ಥಳಿತ- ಸವಾದ್ ಸುಳ್ಯ ಖಂಡನೆ

0
182

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಪುತ್ತೂರು-: ಹೋಂ ವರ್ಕ್ ಮಾಡದೆ ತರಗತಿಗೆ ಹಾಜರಾದ ದ್ವೀತಿಯ ವರ್ಷದ ಮೆಕಾನಿಕಲ್ ಇಂಜಿನಿಯರಿಂಗ್ ವಿದ್ಯಾರ್ಥಿ ಮನ್ಸೂರ್ ಎಂಬ ವಿದ್ಯಾರ್ಥಿಗೆ ಶಿಕ್ಷಕರಾದ ಶಿವಪ್ರಸಾದ್ ಎಂಬವರು ಹೀನಾಯವಾಗಿ ಥಳಿಸಿರುವ ಘಟನೆಯೊಂದು ಪುತ್ತೂರಿನ ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದಿದ್ದು ಇದು ಅತ್ಯಂತ ಅಪಾಯಕಾರಿ ಬೆಳವಣಿಗೆ ಮತ್ತು ಖಂಡನೀಯವಾಗಿದೆ ಎಂದು ಏನ್ ಯಸ್ ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ರವರು ತಿಳಿಸಿದರು.

ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ ಸವಾದ್ ಸುಳ್ಯ ವಿದ್ಯಾರ್ಥಿಗಳಿಗೆ ಸರಿಯಾದ ರೀತಿಯಲ್ಲಿ ಮಾರ್ಗದರ್ಶನ ಶಿಕ್ಷಣ ಭೋಧನೆ ಮಾಡಬೇಕಾದ ಶಿಕ್ಷಕರು ವಿದ್ಯಾರ್ಥಿಗಳ ಮೇಲೆ ಗುರಿಯಾಗಿಸಿಕೊಂಡು ನಿರ್ದಿಷ್ಟ ಸಮುದಾಯದ ವಿದ್ಯಾರ್ಥಿ ಎಂದು ಗುರಿಯಾಗಿಸಿಕೊಂಡು ಹಲ್ಲೆ ನಡೆಸಿರುವುದರ ಹಿಂದಿನ ಉದ್ದೇಶ ಏನು ಎಂಬುದರ ಬಗ್ಗೆ ಸಮಗ್ರ ತನಿಖೆಯಾಗುವ ಮೂಲಕ ಅಮಾಯಕ ವಿದ್ಯಾರ್ಥಿ ಮನ್ಸೂರ್ ಅವರಿಗೆ ನ್ಯಾಯ ಸಿಗಬೇಕು ಎಂದರು.

ಈ ನಿಟ್ಟಿನಲ್ಲಿ ನಾನು ಸಂಬಂಧಪಟ್ಟವರ ಜೊತೆ ಮಾತನಾಡಿ ನ್ಯಾಯ ದೊರಕಿಸಲು ಪ್ರಾಮಣಿಕ ಪ್ರಯತ್ನವನ್ನು ಮಾಡ್ತೇನೆ ಎಂದು ಪತ್ರಿಕಾ ಹೇಳಿಕೆಯ ಮೂಲಕ ಏನ್ ಯಸ್ ಯು ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸವಾದ್ ಸುಳ್ಯ ತಿಳಿಸಿದರು.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)