ಬೈಂದೂರು: ಸ್ವಚ್ಚತಾ ಅಭಿಯಾನ,ಜಾಥಾ ಹಾಗೂ ಶ್ರಮಧಾನ ಕಾರ್ಯಕ್ರಮ

0
255

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಬೈಂದೂರು: ಬೈಂದೂರು;ನೆಹರು ಯುವ ಕೇಂದ್ರ ಉಡುಪಿ,ಮಾರಿಕಾಂಬಾ ಯೂತ್ ಕ್ಲಬ್ ಕಳವಾಡಿ,ರಾಷ್ಟ್ರೀಯ ಸೇವಾ ಯೋಜನೆ ರೋವರ್ಸ್ ಮತ್ತು ರೆಂಜರ್, ಸ.ಪ್ರ.ದರ್ಜೆ ಕಾಲೇಜು ಬೈಂದೂರು ಇದರ ಜಂಟಿ ಆಶ್ರಯದಲ್ಲಿ ಮಹಾತ್ಮ ಗಾಂಧಿಜೀಯವರ 150ನೇ ಜನ್ಮ ದಿನಾಚರಣೆಯ ಪ್ರಯುಕ್ತ ಸ್ವಚ್ಚತಾ ಅಭಿಯಾನ,ಜಾಥಾ ಹಾಗೂ ಶ್ರಮದಾನ ಕಾರ್ಯಕ್ರಮ ನಡೆಯಿತು.ಬೈಂದೂರು ಆರಕ್ಷಕ ಠಾಣೆ,ಸಮುದಾಯ ಆರೋಗ್ಯ ಕೇಂದ್ರ ಬೈಂದೂರು,ಸೋಮೇಶ್ವರ ಬೀಚ್ ಮುಂತಾದ ಕಡೆಗಳಲ್ಲಿ ಸ್ವಚ್ಚತಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ಎನ್.ಎಸ್.ಎಸ್ ಅಧಿಕಾರಿ ಲತಾ ಪೂಜಾರಿ,ನೆಹರು ಯುವ ಕೇಂದ್ರದ ಉದಯ ಕುಮಾರ್,ಮಾರಿಕಾಂಬಾ ಯೂತ್ ಕ್ಲಬ್ ಅಧ್ಯಕ್ಷ ರಾಘವೇಂದ್ರ,ರೋವರ್‍ಸ್ ರೆಂಜರ್‍ಸ್ ಸಂಚಾಲಕಿ ಸೋಮೇಶ್ವರಿ ಟಿ,ಉಪನ್ಯಾಸಕರು ಹಾಗೂ ಎನ್.ಎಸ್.ಎಸ್.ಘಟಕದ ವಿದ್ಯಾರ್ಥಿಗಳು ಹಾಜರಿದ್ದರು.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)