ಹಳಿ ತಪ್ಪಿದ ರೈಲು: 7 ಮಂದಿಯ ಸಾವು, 30 ಮಂದಿ ಗಾಯ

0
188

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಲಕ್ನೋ: ರೈಲು ಹಳಿ ತಪ್ಪಿದ ಪರಿಣಾಮ 7 ಮಂದಿ ಮೃತಪಟ್ಟಿದ್ದು, ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಉತ್ತರಪ್ರದೇಶದಲ್ಲಿ ನಡೆದಿದೆ.

ಫರಕ್ಕಾ ಎಕ್ಸ್ ಪ್ರೆಸ್ ರೈಲು ರೈಲು ಪಶ್ಚಿಮ ಬಂಗಾಳದ ಮಾಲ್ಡಾ ಪಟ್ಟಣದಿಂದ ದೆಹಲಿಗೆ ತೆರಳುತ್ತಿದ್ದ ಸಂದರ್ಭ ರಾಯ್ ಬರೇಲಿ ಹರ್ಚದ್ಪುರ್ ರೈಲ್ವೇ ನಿಲ್ದಾಣದ ಬಳಿ ರೈಲು ಹಳಿ ತಪ್ಪಿದ ಪರಿಣಾಮ 7 ಮಂದಿ ಮೃತಪಟ್ಟಿದ್ದು, ಸುಮಾರು 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಗಾಯಗೊಂಡವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಲಕ್ನೋ ಹಾಗೂ ವಾರಣಾಸಿ ಅಧಿಕಾರಿಗಳು ಸ್ಥಳಕ್ಕಾಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.

ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರು, ಈ ಘಟನೆಯ ಬಗ್ಗೆ ತನಿಖೆ ಮಾಡುವಂತೆ ಆದೇಶಿಸಿದ್ದಾರೆ. ಈ ರೈಲು ಅಪಘಾತದಿಂದ ಆ ಮಾರ್ಗದ ಎಲ್ಲ ರೈಲುಗಳನ್ನು ನಿರ್ಬಂಧಿಸಲಾಗಿದ್ದು, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)