ಪತಿ ಬೈದಿದ್ದಕ್ಕೆ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ

0
169

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)

ಬೆಂಗಳೂರು: ಕ್ಷುಲ್ಲಕ ವಿಚಾರಕ್ಕೆ ಪತಿಯೊಂದಿಗೆ ಜಗಳವಾಡಿ ಪತ್ನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಕದಿರೇನಹಳ್ಳಿಯಲ್ಲಿ ನಡೆದಿದೆ.

ಸಂಜನಿ(24) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಸಂಜನಿ ಮಕ್ಕಳನ್ನು ಶಾಲೆಗೆ ಕಳಿಸುವಾಗ ಅಡುಗೆ ಮಾಡಿರಲಿಲ್ಲ. ಇದರಿಂದ ಕೋಪಗೊಂಡ ಪತಿ, ಮಕ್ಕಳು ಶಾಲೆಗೆ ಹಸಿವಿನಲ್ಲಿ ಹೋಗಬೇಕಾ ಎಂದು ಪ್ರಶ್ನಿಸಿದ್ದಾನೆ. ಪತಿ ಬೈದಿದ್ದಕ್ಕೆ ಪತ್ನಿ ಮನನೊಂದಿದ್ದರು ಎನ್ನಲಾಗುತ್ತಿದೆ.

ಮಕ್ಕಳು ಶಾಲೆಗೆ ತೆರಳಿದಾಗ ಮನೆಯಲ್ಲಿ ಯಾರು ಇಲ್ಲದ ವೇಳೆ ಸಂಜನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ಬನಶಂಕರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (1) ಅಭಿಪ್ರಾಯವಿಲ್ಲ (0)