ಮರಳು ಸಮಸ್ಯೆಯನ್ನು ಇತ್ಯರ್ಥಗೊಳಿಸುವಂತೆ ಕೇಂದ್ರ ಪರಿಸರ ಸಚಿವರಿಗೆ ಮನವಿ

0
622

  

ಮರಳು ಸಮಸ್ಯೆಯನ್ನು ಇತ್ಯರ್ಥಗೊಳಿಸುವಂತೆ ಮಾನ್ಯ ಕೇಂದ್ರ ಪರಿಸರ ಸಚಿವರಾದ  ಹರ್ಷವರ್ಧನ್ ರವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಉಡುಪಿ ಜಿಲ್ಲೆಯಲ್ಲಿ ತಲೆದೂರಿರುವ CRZ ವ್ಯಾಪ್ತಿಯ ಮರಳು ದಿಬ್ಬಗಳ ಗುರುತಿಸುವುದು ಹಾಗೂ ಮರಳು ಸಮಸ್ಯೆಗಳ ಜೊತೆಗೆ, 170 ಸಾಂಪ್ರದಾಯಿಕ ಮರಳು ಗಣಿಗಾರಿಕೆಗೆ ಅವಕಾಶ ನೀಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಮಾಡುವಂತೆ ಮಾನ್ಯ ಕೇಂದ್ರ ಪರಿಸರ ಸಚಿವರಾದ ಶ್ರೀ ಹರ್ಷವರ್ಧನ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಬೈಂದೂರು ಶಾಸಕರಾದ ಬಿ ಎಮ್ ಸುಕುಮಾರ ಶೆಟ್ಟಿ ವಿನಂತಿಸಿದರು.

ಈ ಸಂಧರ್ಭದಲ್ಲಿ ಮಾನ್ಯ ಕೇಂದ್ರ ಸಚಿವರಾದ ಡಿ ವಿ ಸದಾನಂದ ಗೌಡ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ ಪೂಜಾರಿ, ವಿಧಾನಸಭೆ ಮುಖ್ಯ ಸಚೇತಕರಾದ ಸುನೀಲ ಕುಮಾರ, ಉಡುಪಿ ಶಾಸಕರಾದ ರಘುಪತಿ ಭಟ್, ಕಾಪು ಶಾಸಕರಾದ ಲಾಲಾಜಿ ಮೆಂಡನ್ ಉಪಸ್ಥಿತರಿದ್ದರು.