ಗೋವಿಂದ ಬಿಲ್ಲವರಿಗೆ ಜ್ಞಾನ ಸಿಂಧು ರಾಜ್ಯ ಪ್ರಶಸ್ತಿ

0
116

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)

ಸರಕಾರಿ ಪ್ರೌಡಶಾಲೆ ಕಿರಿಮಂಜೇಶ್ವರದ ಕನ್ನಡ ಭಾಷಾ ಶಿಕ್ಷಕರಾದ ಗೋವಿಂದ ಬಿಲ್ಲವ.ಕೆ ಇವರು 2018ನೇ ಸಾಲಿನ ಜ್ಞಾನ ಸಿಂಧು ರಾಜ್ಯ ಪ್ರಶಸ್ತಿ ಆಯ್ಕೆಯಾಗಿದ್ದಾರೆ. ಪ್ರತಿಷ್ಠಿತ ಶಿಕ್ಷಣ ಜ್ಞಾನ ಪತ್ರಿಕೆಯ ಸಹಯೋಗದೊಂದಿಗೆ ಸಾಹಿತ್ಯಿಕ, ಶೈಕ್ಷಣಿಕ ರಂಗದಲ್ಲಿ ವಿಶಿಷ್ಠ ಸೇವೆ ಸಲ್ಲಿಸಿ, ಸಂಘಟನಾತ್ಮಕವಾಗಿ ಕಾರ್ಯ ನಿರ್ವಹಿಸುತ್ತಿರುವ ಸಾಧಕರನ್ನು ಗುರುತಿಸಿ ಈ ಪ್ರಶಸ್ತಿ ನೀಡಲಾಗುತ್ತಿದೆ.

ಇವರು ಕನ್ನಡ ಮತ್ತು ಇತಿಹಾಸ ವಿಷಯದಲ್ಲಿ ಸ್ನಾತಕೋತ್ತರ ಪದವೀಧರರಾಗಿದ್ದು, ಕಳೆದ 36 ವರ್ಷಗಳಿಂದ ಶಿಕ್ಷಣ ಇಲಾಖೆಯ ವಿವಿಧ ಸ್ತರದ ಹುದ್ದೆಗಳಲ್ಲಿ ವಿವಿಧ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಕ್ಷೇತ್ರ ಸಂಪನ್ಮೂಲ ವ್ಯಕ್ತಿಯಾಗಿ ವಿವಿಧ ತರಬೇತಿಗಳಲ್ಲಿ ಭಾಗವಹಿಸಿ ರಾಜ್ಯ ಮಟ್ಟದ ಸಂಪನ್ಮೂಲ ವ್ಯಕ್ತಿಯಾಗಿ ಖ್ಯಾತಿಯಾಗಿದ್ದಾರೆ.

ಉಡುಪಿ ಜಿಲ್ಲಾ ಆದರ್ಶ ಶಿಕ್ಷಕ ಪ್ರಶಸ್ತಿ, ಶಿಕ್ಷಕ ಕಲ್ಯಾಣ ನಿಧಿಯ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತು. ಕರ್ನಾಟಕ ಜಾನಪದ ಪರಿಷತ್ತು ಮತ್ತಿತರ ವಿವಿಧ ಸಂಘಟನೆಗಳಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿದ್ದಾರೆ.

ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (0) ಸಮ್ಮತ (0) ಅಸಮ್ಮತ (0) ಖಂಡಿಸುವೆ (0) ಅಭಿಪ್ರಾಯವಿಲ್ಲ (0)