ಪತ್ರಕರ್ತ ಚಂದ್ರ ಹೆಮ್ಮಾಡಿ ವಿರುದ್ಧ 21 ಪೋಕ್ಸೊ ಪ್ರಕರಣ ….!

0
151

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)

ಕುಂದಾಪುರ : ಬಾಲಕರ ಮೇಲೆ ಸಲಿಂಗ ಕಾಮ ಎಸಗಿದ ಆರೋಪದಲ್ಲಿ ಬಂಧಿತನಾಗಿರುವ ಪತ್ರಕರ್ತ ಚಂದ್ರ ಕೆ ಹೆಮ್ಮಾಡಿ ವಿರುದ್ದ ಒಟ್ಟು 21 ಪೋಕ್ಸೊ ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿವೆ.

ಪೊಲೀಸ್ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಆರೋಪಿಯನ್ನು ನ್ಯಾಯಾಲಯದ ಎದುರು ಹಾಜರುಪಡಿಸಲಾಗಿದ್ದು ನ್ಯಾಯಾಂಗ ಬಂಧನಕ್ಕೆ ಆತನನ್ನು ಒಪ್ಪಿಸಲಾಗಿದೆ.

ಸದ್ಯ ಈತನನ್ನು ನ್ಯಾಯಾಲಯವು ಡಿಸೆಂಬರ್ 17ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.

ಚಂದ್ರ ಹೆಮ್ಮಾಡಿಯ ವಿರುದ್ಧ ದಾಖಲಾಗಿರುವ ಒಟ್ಟು 21 ಪೋಕ್ಸೊ ಪ್ರಕರಣಗಳು ಭಾರತದಲ್ಲಿ ಪೋಕ್ಸೊ ಕಾಯ್ದೆ ಜಾರಿಗೆ ಬಂದ ಬಳಿಕ ಒಬ್ಬ ವ್ಯಕ್ತಿಯ ವಿರುದ್ಧ ದಾಖಲಾದ ಅತ್ಯಧಿಕ ಪ್ರಕರಣಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಬೈಂದೂರು ಠಾಣೆಯಲ್ಲಿ ಮೊದಲ ಪ್ರಕರಣ ದಾಖಲಾದ ಬಳಿಕ ಸರಣಿ ಪ್ರಕರಣಗಳು ಬೆಳಕಿಗೆ ಬಂದಿದ್ದವು. ಬೈಂದೂರು, ಗಂಗೊಳ್ಳಿ ಮತ್ತು ಕುಂದಾಪುರ ಗ್ರಾಮಾಂತರ ಠಾಣೆಗಳಲ್ಲಿ ಹಲವು ಪ್ರಕರಣಗಳು ದಾಖಲಾಗಿವೆ.

ಪತ್ರಕರ್ತ ಚಂದ್ರ ಹೆಮ್ಮಾಡಿಯಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಬಾಲಕರ ಪೋಷಕರು ಸ್ವಯಂಪ್ರೇರಿತರಾಗಿ ದೂರುಗಳನ್ನು ದಾಖಲಿಸುತ್ತಿರುವುದನ್ನು ಕಂಡು ಸ್ವತಃ ಪೊಲೀಸರೆ ಬೆಚ್ಚಿ ಬಿದ್ದಿದ್ದಾರೆ.

ಸಂಗೀತ, ನಾಟಕ ತರಬೇತಿ ನೀಡುವ ನೆಪದಲ್ಲಿ ವಿವಿಧ ಶಾಲೆಗಳಿಗೆ ಭೇಟಿ ನೀಡುತ್ತಿದ್ದ ಚಂದ್ರ ಹೆಮ್ಮಾಡಿ ಅಲ್ಲಿನ ಶಿಕ್ಷಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬಾಲಕರ ಜೊತೆಗೆ ಸಖ್ಯ ಬೆಳೆಸುತ್ತಿದ್ದ ಎನ್ನಲಾಗಿದೆ.

ಬಳಿಕ ಲೈಂಗಿಕವಾಗಿ ದುರುಪಯೋಗಪಡಿಸಿಕೊಳ್ಳುತ್ತಿದ್ದ. ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕುತ್ತಿದ್ದ ಎಂದು ದೂರಲಾಗಿದೆ.

ಚಂದ್ರ ಹೆಮ್ಮಾಡಿಯ ವಿರುದ್ಧ ಇನ್ನೂ ಹಲವು ಪ್ರಕರಣಗಳು ದಾಖಲಾಗುವ ಸಾಧ್ಯತೆ ಇದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.

ನ್ಯಾಯಾಲಯದಲ್ಲಿ ತನ್ನ ಪರ ವಕೀಲರೊಬ್ಬರು ವಾದ ಮಂಡಿಸಲಿದ್ದಾರೆ ಎಂದು ಚಂದ್ರ ಹೆಮ್ಮಾಡಿ ಹೇಳಿಕೊಂಡಿದ್ದರೂ ಸಹ ಯಾವುದೇ ವಕೀಲರು ನ್ಯಾಯಾಲಯದಲ್ಲಿ ಈವರೆಗೂ ಆತನ ಪರ ಹಾಜರಾಗದಿರುವುದು ಪೋಷಕರಿಗೆ ಸಮಾಧಾನ ತಂದಿದೆ.

ಈ ಪ್ರಕರಣ ಇದೀಗ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಆರೋಪಿಯ ಭೀಕರತೆ ಕಂಡು ನಲುಗಿ ಹೋಗಿದ್ದಾರೆ.

ಹೆಚ್ಚಿನ ಓದುಗರು ಈ ಸುದ್ದಿಯನ್ನು ಖಂಡಿಸುವೆ ಎಂದು ಪರಿಗಣಿಸಿದ್ದಾರೆ !
ಈ ವರದಿಯ ಬಗ್ಗೆ ನಿಮ್ಮ ಅನಿಸಿಕೆ ತಿಳಿಸಿ.
ಶಭಾಷ್ (1) ಸಮ್ಮತ (0) ಅಸಮ್ಮತ (0) ಖಂಡಿಸುವೆ (3) ಅಭಿಪ್ರಾಯವಿಲ್ಲ (0)